CrimeLatest

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಗರ್ಭಿಣಿ ಸೇರಿದಂತೆ ಕೇರಳದ ಇಬ್ಬರು ಸಾವು

ಮದ್ದಯ್ಯನಹುಂಡಿ ಬಳಿ ಅಪಘಾತ.. ಬಾಲಕನ ಸ್ಥಿತಿ ಗಂಭೀರ

ಚಾಮರಾಜನಗರ: ಕಾರು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಗರ್ಭಿಣಿ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದಯ್ಯನಹುಂಡಿ ಗ್ರಾಮದ ಸಮೀಪ ನಡೆದಿದೆ.

ಕಾರಿನಲ್ಲಿದ್ದ ಕೇರಳ ಮೂಲದ ಮುನೀರಾ (45) ಹಾಗೂ ಚಾಲಕ ಮುನೀರ್ (30) ಮೃತಪಟ್ಟ ದುರ್ದೈವಿ. ಕಾರಿನಲ್ಲಿದ್ದ 9 ವರ್ಷದ ಬಾಲಕನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.

ಕೇರಳದಿಂದ ಬರುತ್ತಿದ್ದ ಕಾರಿಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಮುನೀರಾ, ಚಾಲಕ ಮುನೀರ್ ಗಂಭೀರ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮುನೀರಾ ಅವರು ಗರ್ಭಿಣಿಯಾಗಿದ್ದರು ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದ 9 ವರ್ಷದ ಬಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅಪಘಾತದ ಬಳಿಕ ತಕ್ಷಣವೇ ಆತನನ್ನು ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಲಾರಿ ಚಾಲಕನ ಬೇಜವಾಬ್ದಾರಿತನವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

admin
the authoradmin

Leave a Reply

Translate to any language you want