Job NewsLatest

ಮಂಡ್ಯರಮೇಶ್ ನೇತೃತ್ವದ ನಟನರಂಗ ಶಾಲೆಯಿಂದ ನಟನ ರಂಗಭೂಮಿ ಡಿಪ್ಲೋಮಾ ತರಗತಿ ಆರಂಭ

ನಟನರಂಗ ಶಾಲೆಯ ರಂಗಭೂಮಿ ಡಿಪ್ಲೊಮಾ 2026-27 (ಒಂದು ವರ್ಷದಅಭಿನಯ ಮತ್ತು ರಂಗ ತರಬೇತಿ) ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ಮೇ 17ರಂದು ನಡೆಯಲಿದ್ದು, ಆಸಕ್ತರು ಇದರಲ್ಲಿ ಭಾಗವಹಿಸಬಹುದಾಗಿದೆ.

ಮಂಡ್ಯರಮೇಶ್ ನೇತೃತ್ವದ ನಟನರಂಗ ಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನ ಶೀಲವಾಗಿದೆ.

ತನ್ನ ಚಟುವಟಿಕೆಯ ಭಾಗವಾಗಿ 16ರಿಂದ 32 ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ವಸತಿರಹಿತ ರಂಗಭೂಮಿ ಡಿಪ್ಲೊಮಾ ಕೋರ್ಸ್‌ ನ್ನು ನಡೆಸುತ್ತಿದ್ದು,  ಕಳೆದ ಅನೇಕ ವರ್ಷಗಳಿಂದ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸಿ ನಟನರಂಗ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ನಟನರಂಗ ಶಾಲೆಯಲ್ಲಿ ತರಬೇತಿ ಪಡೆದ ಸುಮಾರು 500ಕ್ಕೂ ಹೆಚ್ಚು ಕಲಾವಿದರು ದೇಶದಾದ್ಯಂತ ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಸಂದರ್ಶನ(ಆಡಿಷನ್) ಮೇ.17ರಂದು ಬೆಳಿಗ್ಗೆ 10ಗಂಟೆಗೆ ಸರಿಯಾಗಿ ಮೈಸೂರಿನರಾಮಕೃಷ್ಣ ನಗರದಲ್ಲಿರುವ ನಟನರಂಗಶಾಲೆಯಲ್ಲಿ ನಡೆಯಲಿದೆ. ಪ್ರತಿದಿನ ಸಂಜೆ 5.30ರಿಂದ 9ರವರೆಗೆ ತರಗತಿಗಳು ನಡೆಯಲಿದ್ದು, ಅಭಿನಯ, ರಂಗ ಸಿದ್ಧಾಂತ, ರಂಗ ಸಂಗೀತ, ಆಂಗಿಕ ಚಲನೆ, ಧ್ವನಿ ಬಳಕೆ, ಪ್ರಸಾಧನ, ಬೆಳಕು, ರಂಗ ವಿನ್ಯಾಸ, ಪರಿಕರ ನಿರ್ಮಾಣ, ರಂಗ ಇತಿಹಾಸ, ನಾಟಕ ತಯಾರಿ, ಪ್ರದರ್ಶನ.. ಹೀಗೆ ರಂಗಭೂಮಿಯ ಬೇರೆ ಬೇರೆ ಆಯಾಮಗಳ ಪರಿಚಯಾತ್ಮಕ ಪ್ರಾಯೋಗಿಕ ತರಗತಿಗಳು ನಡೆಯಲಿದೆ.

ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ದಿನಾಂಕದಂದೇ ಸಂದರ್ಶನದಲ್ಲಿ ಭಾಗವಹಿಸತಕ್ಕದ್ದು, ರಂಗಭೂಮಿಯನ್ನು ಗಂಭೀರವಾಗಿ ಅಭ್ಯಸಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಕಛೇರಿಯಲ್ಲಿ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಪಡೆದು ಅಂಚೆ ಮುಖಾಂತರ ಅಥವಾ ನೇರವಾಗಿ ತಲುಪಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ 7259537777, 9480468327, 9845595505  ಸಂಪರ್ಕಿಸ ಬಹುದಾಗಿದೆ.

admin
the authoradmin

Leave a Reply

Translate to any language you want