LatestMysorePolitical

ಮೋದಿ ವಿರುದ್ಧ ಕಾಂಗ್ರೆಸ್ ನಾಯಕರ ಹೇಳಿಕೆಗಳು ಪಕ್ಷದ ಸಾಂಸ್ಕೃತಿಕ ದಿವಾಳಿತನಕ್ಕೆ ಸಾಕ್ಷಿ

ಬಿಜೆಪಿ ಓಬಿಸಿ ಮೋರ್ಚಾದ ಮೈ ನಾ ಲೋಕೇಶ್ ಆಕ್ರೋಶ

ಮೈಸೂರು: ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಬಗ್ಗೆ ಲಘುವಾಗಿ ಮಾತನಾಡಿರುವ ರಾಹುಲ್ ಗಾಂಧಿ, ಬಿ ಕೆ ಹರಿಪ್ರಸಾದ್ ಹಾಗೂ  ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಮೈ ನಾ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು  ರಾಹುಲ್ ಗಾಂಧಿ, ಹರಿಪ್ರಸಾದ್, ಮಲ್ಲಿಕಾರ್ಜುನ ಖರ್ಗೆ ಅವರ  ಹೇಳಿಕೆಗಳು ಕಾಂಗ್ರೆಸ್  ನೈತಿಕ ಅಧಃಪತನಕ್ಕೆ ಸಾಕ್ಷಿಯಾಗಿವೆ. ಜವಬ್ದಾರಿಯುತ ಸ್ಥಾನದಲ್ಲಿರುವವರು ತಮ್ಮ ಹೇಳಿಕೆಗಳನ್ನು ನೀಡುವಾಗ ಅದು ಗೌರವಯುತವಾಗಿರುವಂತೆ ನೋಡಿಕೊಳ್ಳಬೇಕಾಗುತ್ತದೆ. ಇಲ್ಲದೆ ಹೋದರೆ ದೇಶದ ಜನರ ಮುಂದೆ ಸಣ್ಣವರಾಗುತ್ತೀರಾ? ಇಂತಹ ನಿಮ್ಮ ಹೇಳಿಕೆಗಳಿಂದಲೇ ಕಾಂಗ್ರೆಸ್ ಪಕ್ಷ ಮೂಲೆಗುಂಪಾಗುತ್ತಿರುವುದು.

ಇಂತಹ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಸಾಂಸ್ಕೃತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದ್ದು, ಈಗಾಗಲೇ ದೇಶದಲ್ಲಿ ದುರ್ಬೀನು ಹಾಕಿ ಹುಡುಕುವ ಹೀನಾಯ ಸ್ಥಿತಿಗೆ ತಲುಪಿರುವ ಕಾಂಗ್ರೆಸ್, ತನ್ನ ನಾಯಕರ ಐಲುತನದಿಂದ , ಮುಂದಿನ ದಿನಗಳಲ್ಲಿ, ನಾಮಾವಶೇಷ ಆಗುವುದರಲ್ಲಿ ಸಂಶಯವಿಲ್ಲ, ಎಂದು ಕಿಡಿಕಾರಿದ್ದಾರೆ.

ರೈತರು, ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು  ಹಿಂಪಡೆಯುವ ಸಂದರ್ಭದಲ್ಲಿ ಗಲಭೆಕೋರರ, ಲೂಟಿಕೋರರ ಮೇಲಿನ ಕೇಸ್ ಗಳನ್ನು  ಹಿಂಪಡೆಯುವ ರಾಜ್ಯ ಸರ್ಕಾರದ ಸಚಿವ ಸಂಪುಟದ ನಿರ್ಧಾರ ಓಲೈಕೆ ರಾಜಕಾರಣದ ಪರಮಾವಧಿಯಾಗಿದ್ದು ಇದಕ್ಕಾಗಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

admin
the authoradmin

Leave a Reply

Translate to any language you want