Job NewsLatest

ಕನ್ನಡದಲ್ಲಿ ಸಾಧನೆಗೈದ SSLC-PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ… ಈಗಲೇ ಅರ್ಜಿ ಸಲ್ಲಿಸಿ

 ಮೈಸೂರು: ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಮತ್ತು ಕನ್ನಡದಲ್ಲಿ  ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಕನ್ನಡಾಂಬೆ ರಕ್ಷಣಾ ವೇದಿಕೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿದೆ.

2025 -26ನೇ ಸಾಲಿನ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಕನ್ನಡಾಂಬೆ ರಕ್ಷಣಾ ವೇದಿಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಶೇ.90ಕ್ಕೂ ಅಧಿಕ ಅಂಕ ಪಡೆದ ಅಥವಾ ಕನ್ನಡ ಭಾಷೆಯಲ್ಲಿ 125 ಕ್ಕೆ 125 ಅಂಕ ಪಡೆದ ಜಿಲ್ಲೆಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮೇ 31ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕಿದೆ.

ಕನ್ನಡಾಂಬೆ ರಕ್ಷಣಾ ವೇದಿಕೆ ಕಚೇರಿಗೆ ಅರ್ಜಿಯ ಜತೆ ಅಂಕಪಟ್ಟ, ಇತ್ತೀಚಿನ ಭಾವಚಿತ್ರ ಸಲ್ಲಿಸಬಹದು ಅಥವಾ ಈ ಕೆಳಕಂಡ ಫೋನ್ ನಂಬರ್ ಮೂಲಕ ವಾಟ್ಸಾಪ್ ಮುಖಾಂತರ ನೋಂದಾಯಿಸಿ ಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ಫೋನ್ ನಂಬರ್ – 9164934995,  7259999381, 8884573351 ಎಂದು ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಕೋರಿದ್ದಾರೆ.

admin
the authoradmin

Leave a Reply

Translate to any language you want