LatestMysore

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಫಲಾನುಭವಿಗಳಿಗೆ ವೀಲ್‌ ಚೇರ್ ವಿತರಣೆ

 ಕೆ.ಆರ್.ನಗರ(ಸಂಘಟನೆ ಮಂಜುನಾಥ್): ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನೀಡಲಾಗುವ ವಿವಿಧ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಯೋಜನಾಧಿಕಾರಿ ಕೆ.ಸದಾನಂದ ದೇವಾಡಿಗ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ಫಲಾನುಭವಿಗಳ ಮನೆಗಳಿಗೆ ತೆರಳಿ ವೀಲ್‌ ಚೇರ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಡಾ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಸಮಾಜಮುಖಿ ಕಾರ್ಯಗಳು ಶ್ಲಾಘನೀಯ. ಅವುಗಳನ್ನು ಉಪಯೋಗಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

ಮಾವತ್ತೂರು ಕಾರ್ಯ ಕ್ಷೇತ್ರದ ರಾಮಶೆಟ್ಟಿ, ಪಟ್ಟಣದ ಆಂಜನೇಯ ಬಡಾವಣೆಯ ಸೂರಜ್, ಮಧುವನಹಳ್ಳಿ ಕಾರ್ಯಕ್ಷೇತ್ರದ ಲಕ್ಷ್ಮಮ್ಮ ಅವರಿಗೆ ವೀಲ್ಡ್ ಚೇರ್ ವಿತರಿಸಲಾಯಿತು.

ಪುರಸಭೆ ಮಾಜಿ ಅಧ್ಯಕ್ಷ ಕೋಳಿ ಪ್ರಕಾಶ್, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸುನೀತ ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್, ಸಚ್ಚೇಗೌಡ, ಮುಖಂಡರಾದ ರವಿಕುಮಾರ್, ಗೋಪಾಲರಾಜೇ ಅರಸ್, ರವಿಕುಮಾರ್, ಮೇಲ್ವಿಚಾ ರಕರಾದ ರಜನಿಕಾಂತ್, ರವಿ, ಹರ್ಷಿತ, ಕೃಷಿ ಮೇಲ್ವಿಚಾರಕ ಸಿ.ಮಹದೇವಸ್ವಾಮಿ ಹಾಜರಿದ್ದರು.

admin
the authoradmin

Leave a Reply

Translate to any language you want