CrimeLatest

ಡೆತ್ ನೋಟ್ ಬರೆದಿಟ್ಟು ಪ್ರಾಣಹಾನಿ ಮಾಡಿಕೊಂಡ ಉಪ ತಹಸೀಲ್ದಾರ್ ತಿಮ್ಮಯ್ಯ… ಕಾರಣವೇನು?

ಸಾಲಿಗ್ರಾಮ(ಸಂಘಟನೆ ಮಂಜುನಾಥ್): ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪ ತಹಸೀಲ್ದಾರ್ ತಿಮ್ಮಯ್ಯ ಡೆತ್ ನೋಟ್ ಬರೆದಿಟ್ಟು ಹಾಸನದ ಲಾಡ್ಜ್‌ವೊಂದರಲ್ಲೆ ನೇಣು ಬಿಗಿದುಕೊಂಡು ಪ್ರಾಣಕ್ಕೆ ಸಂಚಕಾರ ತಂದುಕೊಂಡಿದ್ದಾರೆ.

ಮೃತರಿಗೆ ಪತ್ನಿ ಮಮತಾ, ಓರ್ವ ಮಗಳು ಇದ್ದಾರೆ. ಸಾವಿಗೂ ಮುನ್ನ ಅವರು ನಾಲ್ಕು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಾವಿಗೆ ನಿಖರವಾದ ಕಾರಣವೇನು ಎಂಬುದು ಅದರಲ್ಲಿ ಉಲ್ಲೇಖವಾಗಿರುವ ಸಾಧ್ಯತೆಯಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್ ನೋಟ್‌ನಲ್ಲಿರುವ ಅಂಶಗಳ ಆಧಾರದ ಮೇಲೆ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದು, ಯಾವ ಕಾರಣಕ್ಕಾಗಿ ಈ ನಿರ್ಧಾರ ಕೈಗೊಂಡರು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.  ಮೃತರ ಸಾವಿಗೆ ಸಾಲಿಗ್ರಾಮ ತಾಲೂಕು ತಹಸೀಲ್ದಾರ್ ರುಕಿಯಾ ಬೇಗಂ ಸಂತಾಪ ಸೂಚಿಸಿದ್ದಾರೆ.

admin
the authoradmin

Leave a Reply

Translate to any language you want