LatestMysore

ಸಾಲಿಗ್ರಾಮ, ಕೆ.ಆರ್.ನಗರದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.. ಅರ್ಜಿ ಸಲ್ಲಿಸಿ

 

ಕೆ.ಆರ್.ನಗರ(ಸಂಘಟನೆ ಮಂಜುನಾಥ್):ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ನೌಕರರ ಸಂಘದ ತಾಲೂಕು ಶಾಖೆಯ ವತಿಯಿಂದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತ ಅರ್ಹ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರಗಳ ಸ್ವಯಂ ದೃಢೀಕರಿಸಿದ ನಕಲು ಪ್ರತಿಗಳು, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಮತ್ತು ದೂರವಾಣಿ ಸಂಖ್ಯೆಯೊಂದಿಗೆ ಜೂ.15ರೊಳಗೆ ಅರ್ಜಿಯನ್ನು ವಾಟ್ಸ್ ಅಪ್ ಮುಖಾಂತರ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಘದ ಅಧ್ಯಕ್ಷ ಎನ್.ಕೆ.ಮಹದೇವಪ್ಪ-9972123199, ಖಜಾಂಚಿ ಕಿರಣ್‌ಕುಮಾರ್-9739220924, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಮಹದೇವ-8105405409 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸಂಘದ ಪ್ರಧಾನಕಾರ್ಯದರ್ಶಿ ಎಂ.ಎಲ್.ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

admin
the authoradmin

Leave a Reply

Translate to any language you want