janamanakannada > Blog > Latest > Mysore > ಡಿಕೆಶಿ ಸಿಎಂ… ಹಿರೀಕ್ಯಾತನಹಳ್ಳಿಯಲ್ಲಿ ಸಿಹಿಹಂಚಿ, ಪಟಾಕಿ ಸಿಡಿಸಿ ಕಾರ್ಯಕರ್ತರ ಸಂಭ್ರಮ

ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಣಸೂರು ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಮಾಜದ ಮುಖಂಡರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮೊದಲು ಗ್ರಾಮ ದೇವತೆ ಶ್ರೀ ಮಲ್ಲಿಕಾರ್ಜುನ ಹಾಗೂ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ನಂತರ ಗ್ರಾಮದ ಪ್ರಮುಖ ಸರ್ಕಾರಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಕಟೌಟ್ ಹಾಕಿ ಪಟಾಕಿ ಸಿಡಿಸಿ ಸಿಹಿ ಹಂಚಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜವರೇಗೌಡ, ಮುಖಂಡರಾದ ಕೋಳಿ ಪುಟ್ಟರಾಜು, ಶಿವಪ್ಪ, ವಿಜಯ್, ಗಣೇಶ, ಮಹೇಶ್, ಚನ್ನರಸ, ಮಹದೇವ್, ಕ್ರೇಜಿ ಮಹೇಶ್ ಸ್ವಾಮಿನಾಯಕ, ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
admin
You Might Also Like
ಸಮಾಜದಲ್ಲಿ ಉನ್ನತಸ್ಥಾನಕ್ಕೇರಲು ಶಿಕ್ಷಕರ ಪಾತ್ರ ಮುಖ್ಯ: ಶಾಸಕ ಡಿ.ರವಿಶಂಕರ್
adminಸೆಪ್ಟೆಂಬರ್ 6, 2026








