LatestMysore

ಮಾಗಳಿ ಸರ್ಕಾರಿ ಶಾಲೆಯಲ್ಲಿ ಯುವ ಕಾಂಗ್ರೆಸ್‌ನಿಂದ ವಿಶ್ವ ಪರಿಸರ ದಿನಾಚರಣೆ

ಪಿರಿಯಾಪಟ್ಟಣ(ರವಿಚಂದ್ರ ಬೂದಿತಿಟ್ಟು): ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ತಾಲೂಕಿನ ಮಾಗಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಅರ್ಥಪೂರ್ಣವಾಗಿ ಪರಿಸರ ದಿನವನ್ನು ಆಚರಿಸಲಾಯಿತು.

​ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷರಾದ  ರಘು (ಹಬಟೂರು) ರವರ ನೇತೃತ್ವದಲ್ಲಿ ಶಾಲಾ ಆವರಣಕ್ಕೆ ಭೇಟಿ ನೀಡಿದ ಪದಾಧಿಕಾರಿಗಳು, ಶಾಲಾ ಸಿಬ್ಬಂದಿ ಹಾಗೂ ಮಕ್ಕಳೊಂದಿಗೆ ಸೇರಿ ಸಸಿಗಳನ್ನು ನೆಟ್ಟು ನೀರೆರೆದರು.

​ಈ ಸಂದರ್ಭದಲ್ಲಿ ಮಾತನಾಡಿದ ರಘು ಪರಿಸರವನ್ನು ಕಾಪಾಡುವುದು ಕೇವಲ ಒಂದು ದಿನದ ಕರ್ತವ್ಯವಲ್ಲ, ಅದು ನಮ್ಮ ನಿರಂತರ ಜವಾಬ್ದಾರಿಯಾಗಿದೆ. ಶಾಲಾ ಹಂತದಲ್ಲೇ ಮಕ್ಕಳಿಗೆ ಪರಿಸರ ಪ್ರೇಮವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

​ಈ ಸಂದರ್ಭದಲ್ಲಿ  ತಾಲೂಕು ಉಪಾಧ್ಯಕ್ಷರಾದ ದಿನೇಶ್, ಜಿಲ್ಲಾ ಯುವ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಅಧ್ಯಕ್ಷರಾದ ಅಬ್ಬಾಸ್, ತಾಲೂಕು ಪ್ರಧಾನ ಕಾರ್ಯದರ್ಶಿ ನಿತೀನ್, ಪ್ರಮುಖರಾದ ಅಭಿಷೇಕ್ ಹಾಗೂ ಪ್ರಭು, ಶಾಲಾ ಮುಖ್ಯ ಶಿಕ್ಷಕರಾದ ಧನಪಾಲ್, ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

admin
the authoradmin

Leave a Reply