ಮೈಸೂರು: ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಮತ್ತು ಸಾಧನೆಗಾಗಿ ಖ್ಯಾತ ಸಾಹಿತಿ ಹಾಗು ಪತ್ರಕರ್ತ ಬನ್ನೂರು ಕೆ. ರಾಜು ಅವರಿಗೆ ಪ್ರಸ್ತುತ 2026ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿಯನ್ನು ಗೌರವಪೂರ್ವಕವಾಗಿ ಪ್ರದಾನ ಮಾಡಲಾಯಿತು.
ಮೈಸೂರು ಜಿಲ್ಲಾಡಳಿತದಿಂದ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಲು ಆಯ್ಕೆಗಿದ್ದ ಹಿರಿಯ ಸಾಹಿತಿ ಹಾಗು ಪತ್ರಕರ್ತ ಬನ್ನೂರು ಕೆ. ರಾಜು ಅವರು ಪಾರ್ಶ್ವವಾಯುವಿನಿಂದ ಅನಾರೋಗ್ಯವಾಗಿದ್ದ ಕಾರಣ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮಕ್ಕೆ ಅವರು ಆಗಮಿಸಿ ಹಾಜರಿದ್ದು ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ಜಿಲ್ಲೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ ಸುದರ್ಶನ್ ಅವರು ಬನ್ನೂರು ಕೆ. ರಾಜು ಅವರ ಸ್ವಗೃಹಕ್ಕೆ ಭೇಟಿ ನೀಡಿ ಅವರಿಗೆ ಮೈಸೂರು ಪೇಟ ತೊಡಿಸಿ , ಶಾಲು ಹೊದಿಸಿ , ಫಲ ತಾಂಬೂಲ ಸಹಿತ ಪ್ರಶಸ್ತಿ ಫಲಕ ನೀಡಿ ಅವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಚಳವಳಿಗಾರರಾದ ಅರವಿಂದ್ ಶರ್ಮ ಉಪಸ್ಥಿತರಿದ್ದರು.








