ಮೈಸೂರು: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಪಂಪ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ (ಸಿಪಿಕೆ) ಹಾಗೂ ದಕ್ಷ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಪಿ.ಜಯಚಂದ್ರ ರಾಜು ಅವರಿಗೆ ‘ನಾಡಕೀರ್ತಿ ಪ್ರಶಸ್ತಿ’, ಸಾಹಿತಿ ಹಾಗೂ ಸಂಘಟಕ ಟಿ. ಸತೀಶ್ ಜವರೇಗೌಡ (ಸಜಗೌ) ಅವರಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭವು ಜೂ. 28 ರಂದು ಮಧ್ಯಾಹ್ನ 2.30 ಗಂಟೆಗೆ ನಡೆಯಲಿದೆ ಪ್ರತಿಷ್ಠಾನದ ಅಧ್ಯಕ್ಷ ಡಾ. ಗುಣವಂತ ಮಂಜು ತಿಳಿಸಿದ್ದಾರೆ.
ಅಂದು ನಗರದ ಹೂಟಗಳ್ಳಿಯಲ್ಲಿರುವ ದಕ್ಷ ಕಾಲೇಜಿನ ಸಭಾಗಂಣದಲ್ಲಿ ನಡೆಯಲಿರುವ ಸಮಾರಂಭವನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷ ನಾಗರಾಜ್ ವಿ. ಬೈರಿ ಉದ್ಘಟಿಸುವರು. ಹಿರಿಯ ಸಾಹಿತಿ ಎಸ್. ಅಕ್ಬರ್ ಪಾಷ ಅಧ್ಯಕ್ಷತೆ ವಹಿಸುವರು. ಅಬಕಾರಿ ಇಲಾಖೆಯ ಮಂಡ್ಯ ಜಿಲ್ಲೆಯ ಉಪ ಆಯುಕ್ತ ಬಿ.ಆರ್. ಹಿರೇಮಠ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟಿ ಭೂಮಿಕಾ, ಗಾಯಕಿ ಜಯಂತಿ ಭಟ್, ಪಿಡಿಓ ಕೆ.ಎಸ್. ಸತೀಶ್ ಕುಮಾರ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಗೌಡಯ್ಯ, ದಕ್ಷ ಕಾಲೇಜಿನ ಕಾರ್ಯದರ್ಶಿ ಸೋನಿಯಾ ಉಮಾಪತಿ, ಪ್ರಾಂಶುಪಾಲ ಎಂ. ಅಭಿಷೇಕ್, ಪ್ರಗತಿಪರ ರೈತ ಪುಟ್ಟಸ್ವಾಮಿಗೌಡ ಭಾಗವಹಿಸುವರು.
ಇದೇ ಸಂದರ್ಭದಲ್ಲಿ ದಕ್ಷ ಕಾಲೇಜಿನ ವಿದ್ಯಾರ್ಥಿಗಳಿಂದ ‘ಕೃತಕ ಬುದ್ಧಿಮತ್ತೆ’ ಕುರಿತು ವಿಚಾರ ಮಂಡನೆ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ‘ನಾರಿಶಕ್ತಿ ಪ್ರಶಸ್ತಿ’ ಸೇರಿದಂತೆ ವಿವಿಧ ಪ್ರಶಸ್ತಿಗಳ ಪ್ರದಾನ ನಡೆಯಲಿದೆ.
ಸಮಾರಂಭದ ಬಳಿಕ ಭಾರತೀಯ ಕುಟುಂಬ ವ್ಯವಸ್ಥೆಯಲ್ಲಿ ಹೆತ್ತವರ ಮಹತ್ವ, ಅವರ ಜೀವನ ಮೌಲ್ಯಗಳನ್ನು ಸಾರುವ ಡಾ. ಗುಣವಂತ ಮಂಜು ನಿರ್ದೇಶನದ ‘ಅನುರಾಗ’ ಕಿರುಚಿತ್ರ ಪ್ರದಶನವೂ ನಡೆಯಲಿದೆ.








