LatestMysore

ಡಾ.ಬಾಬೂಜಿ ಹುಟ್ಟಿದ ನಾಡಿನಲ್ಲಿ ನಾವು ಜನಿಸಿದ್ದೇ ನಮ್ಮ ಪುಣ್ಯ: ಶಾಸಕ ಡಿ.ರವಿಶಂಕರ್

 ಕೆ.ಆರ್.ನಗರ(ಜಿಟೆಕ್ ಶಂಕರ್): ದೇಶದ ಏಳಿಗೆಗೆ ಡಾ.ಬಾಬು ಜಗಜೀವನ ರಾಂ ಅವರ ಕೊಡುಗೆ ಅಪಾರವಾಗಿದ್ದು ಇಂತಹ ಮಹಾನ್ ಪುರುಷ ನಮ್ಮ ನಾಡಿನಲ್ಲಿ ಜನಿಸಿದ್ದು ಎಲ್ಲರ ಪುಣ್ಯ ವಿಶೇಷ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ 40ನೇ ವರ್ಷದ  ಡಾ.ಬಾಬು ಜಗಜೀವನ್ ರಾಂ ಪುಣ್ಯ ಸ್ಮರಣೆ ಆಚರಣೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಜೀವಿತ ಅವಧಿಯಲ್ಲಿ ಹತ್ತು ಹಲವು ಕೊಡುಗೆಗಳನ್ನು ನೀಡಿರುವ ಅವರು ಸ್ವಾತಂತ್ರö್ಯ ಚಳುವಳಿಯಲ್ಲಿಯೂ ಭಾಗವಹಿಸಿ ಆದರ್ಶ ಪುರುಷರಾಗಿದ್ದಾರೆ ಎಂದರು.

ಬದಲಾವಣೆ ನಮ್ಮಿಂದಲೇ ಆರಂಭವಾಗಬೇಕಿದ್ದು ಅದಕ್ಕಾಗಿ ಯಾರನ್ನು ಅವಲಂಭಿಸಬಾರದು ಎಂಬ ತತ್ವವನ್ನು ಹೇಳಿಕೊಟ್ಟ ಜಗಜೀವನ್ ರಾಂ ತಮ್ಮ ರಾಜಕೀಯ ಅಧಿಕಾರವನ್ನು ಎಂದು ಸ್ವಾರ್ಥಕ್ಕಾಗಿ ಬಳಸಿಕೊಳ್ಳದೆ ನೊಂದವರು ಮತ್ತು ಹಿಂದುಳಿದವರ ಏಳಿಗೆಗೆ ಬಳಕೆ ಮಾಡಿಕೊಂಡ ಯುಗ ಪುರುಷ ಎಂದು ಕೊಂಡಾಡಿದರು.

ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಬಾಬು ಜಗಜೀವನರಾಂ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಈಗಾಗಲೇ 50 ಲಕ್ಷ ರೂ ಹಣ ನೀಡಲಾಗಿದ್ದು ಅಗತ್ಯವಿದ್ದಲ್ಲಿ ಮತ್ತಷ್ಟು ಅನುದಾನ ಕೊಡಿಸಿ ಮುಂದಿನ ಮೂರು ತಿಂಗಳೊಳಗೆ ಲೋಕಾರ್ಪಣೆ ಮಾಡಿಸುವ ಭರವಸೆ ನೀಡಿದರು.

ಇದರ ಜತೆಗೆ ಪಟ್ಟಣದ ಹೊರ ವಲಯದಲ್ಲಿ ನಿರ್ಮಾಣ ಮಾಡುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೂ ಸಿದ್ದರಾಮಯ್ಯನವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದಾಗ 3.50 ಕೋಟಿ ನೀಡಿದ್ದು ಅದರೊಂದಿಗೆ ನಾನು ಸಹ ಶಾಸಕರ ನಿಧಿಯಿಂದ 1 ಕೋಟಿ ಹಣ ಒದಗಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಇದಕ್ಕೂ ಮೊದಲು ಶಾಸಕರು ಡಾ.ಬಾಬು ಜಗಜೀವನ್ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ, ಆದಿ ಜಾಂಬವ ಸಂಘದ ಅಧ್ಯಕ್ಷ ಎಂ.ಲೋಕೇಶ್, ತಾ.ಪಂ. ಮಾಜಿ ಸದಸ್ಯ ಎಂ.ಹೆಚ್.ಸ್ವಾಮಿ, ಮುಖಂಡ ಡಿ.ಕೆ.ಕೊಪ್ಪಲುರಾಜಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್ ಮಾತನಾಡಿದರು.

ತಾ.ಪಂ.ಮಾಜಿ ಅಧ್ಯಕ್ಷ ಹಾಡ್ಯಮಹದೇವಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷರಾದ ಕೋಳಿಪ್ರಕಾಶ್, ಡಿ.ಕಾಂತರಾಜು, ಮಾಜಿ ಸದಸ್ಯ ಶಂಕರ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್,  ವಕ್ತಾರ ಸೈಯದ್ ಜಾಬೀರ್, ನಗರಾಧ್ಯಕ್ಷ ಎಂ.ಜೆ.ರಮೇಶ್,  ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ನಂದೀಶ್, ಸಾಲಿಗ್ರಾಮ ತಾಲೂಕು ಅಧ್ಯಕ್ಷ ಕಂಠಿಕುಮಾರ್, ಎಸ್ ಟಿ ವಿಭಾಗದ ಅಧ್ಯಕ್ಷ ತಿಪ್ಪೂರುಮಹದೇವನಾಯಕ

ಕನ್ನಡ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಡಾ.ತಿಮ್ಮಶೆಟ್ಟಿ, ಮುಖಂಡರಾದ ಎಂ.ಟಿ.ರಾಜೇಶ್, ಬಿ.ಹೆಚ್, ಕುಮಾರ್, ಮಹದೇವ್, ಕಾಳಪ್ಪ, ಬಿಇಒ ಆರ್.ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಂಕರಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ಲೋಕೋಪಯೋಗಿ ಇಲಾಖೆಯ ಪ್ರಭಾರ ಎಇಇ ಜಿ.ಎಸ್.ಸಿದ್ದೇಶ್ವರ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಕೃಷ್ಣಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.

 

admin
the authoradmin

Leave a Reply