LatestMysore

ಉಪ್ಪಾರ ಸಮಾಜದ ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ.. ಕಾಂಗ್ರೆಸ್ ಗೆ ಅಭಿನಂದನೆ ಸಲ್ಲಿಕೆ

ಸಾಲಿಗ್ರಾಮ (ಕೆ.ಟಿ.ಮೋಹನ್ ಕುಮಾರ್): ಉಪ್ಪಾರ ಸಮಾಜದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರನ್ನು ಸಚಿವರನ್ನಾಗಿ ಮಾಡಿದ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಕಾಟ್ನಾಳು ಮಹದೇವ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರು, ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಉಪ್ಪಾರ ಸಮಾಜದ ಏಕೈಕ ವಿಧಾನಸಭಾ ಸದಸ್ಯರಾದ ಸಿ.ಪುಟ್ಟರಂಗಶೆಟ್ಟಿಯವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡುವ ಮೂಲಕ ಉಪ್ಪಾರ ಸಮಾಜಕ್ಕೆ ಆದ್ಯತೆಯನ್ನು ನೀಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳಿಗೆ  ಉಪ್ಪಾರ ಸಮಾಜದ ಸಮಸ್ತ ಬಂಧುಗಳ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

admin
the authoradmin

Leave a Reply