LatestMysore

ಇಂಗ್ಲೀಷ್ ನಲ್ಲಿ ಜಮೀರ್ ಅಹಮದ್ ಪ್ರಮಾಣವಚನ… ಕರ್ನಾಟಕ ಹಿತರಕ್ಷಣಾ ಒಕ್ಕೂಟ ಖಂಡನೆ

ಮೈಸೂರು: ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ಪ್ರಮಾಣ ವಚನವನ್ನು ಕನ್ನಡದಲ್ಲಿ ಸ್ವೀಕರಿಸದೆ ಇಂಗ್ಲಿಷ್‌ನಲ್ಲಿ ಸ್ವೀಕರಿಸಿದ ಸಚಿವ ಜಮೀರ್ ಅಹಮದ್ ಅವರ ನಡೆಯನ್ನು ಕರ್ನಾಟಕ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಚಂದ್ರು ಮಂಡ್ಯ ಖಂಡಿಸಿದ್ದಾರೆ

ಕರ್ನಾಟಕ ಸರ್ಕಾರದ ಸಚಿವರಾದ  ಜಮೀರ್ ಅಹಮದ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಕನ್ನಡ ಭಾಷೆಯನ್ನು ಬಳಸದೆ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಅತ್ಯಂತ ಬೇಸರದ ಹಾಗೂ ಖಂಡನೀಯ ಸಂಗತಿಯಾಗಿದೆ.

ಕನ್ನಡವು ಈ ನಾಡಿನ ಅಧಿಕೃತ ಭಾಷೆಯಾಗಿದ್ದು, ರಾಜ್ಯದ ಸಚಿವರಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವುದು ನೈತಿಕ ಜವಾಬ್ದಾರಿ ಮತ್ತು ನಾಡಿನ ಭಾಷೆಗೆ ಸಲ್ಲಿಸಬೇಕಾದ ಗೌರವವಾಗಿದೆ. ರಾಜ್ಯದ ಜನತೆಯ ಪ್ರತಿನಿಧಿಯಾಗಿ ಪ್ರಮಾಣ ವಚನ ಸ್ವೀಕರಿಸುವವರು ಕನ್ನಡ ಭಾಷೆಗೆ ಆದ್ಯತೆ ನೀಡುವುದು ಅತ್ಯಗತ್ಯ.

ಕನ್ನಡ ನೆಲ, ಜಲ, ಸಂಸ್ಕೃತಿ ಮತ್ತು ಭಾಷೆಯ ಬಗ್ಗೆ ಬದ್ಧತೆಯನ್ನು ತೋರಿಸಬೇಕಾದ ಸ್ಥಾನದಲ್ಲಿರುವ ಸಚಿವರು ಕನ್ನಡವನ್ನು ಕಡೆಗಣಿಸಿ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಿದೆ.

ಆದ್ದರಿಂದ ಶ್ರೀ ಜಮೀರ್ ಅಹಮದ್ ಅವರು ತಮ್ಮ ಕ್ರಮದ ಬಗ್ಗೆ ಕನ್ನಡಿಗರ ಕ್ಷಮೆ ಯಾಚಿಸಬೇಕು ಹಾಗೂ ಮುಂದಿನ ಎಲ್ಲ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡುವ ಬದ್ಧತೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಬೇಕು ಎಂದು ಆಗ್ರಹಿಸುತ್ತೇನೆ.

ರಾಜ್ಯದ ಎಲ್ಲ ಜನಪ್ರತಿನಿಧಿಗಳು, ಸಚಿವರು ಹಾಗೂ ಅಧಿಕಾರಿಗಳು ಕನ್ನಡದಲ್ಲಿಯೇ ಆಡಳಿತ ಮತ್ತು ಅಧಿಕೃತ ಕಾರ್ಯಗಳನ್ನು ನಡೆಸುವ ಮೂಲಕ ಕನ್ನಡದ ಗೌರವವನ್ನು ಕಾಪಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

admin
the authoradmin

Leave a Reply