ಕೆ.ಆರ್.ನಗರ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಎಸ್.ಸಿದ್ದೇಗೌಡ, ಉಪಾಧ್ಯಕ್ಷರಾಗಿ ಎನ್.ಎಸ್.ವಿಠಲ ಆಯ್ಕೆ

ಕೆ.ಆರ್.ನಗರ(ಜಿಟೆಕ್ ಶಂಕರ್): ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ದೆಗ್ಗನಹಳ್ಳಿ ಎಸ್.ಸಿದ್ದೇಗೌಡ, ಉಪಾಧ್ಯಕ್ಷರಾಗಿ ನಾರಾಯಪುರ ಎನ್.ಎಸ್.ವಿಠಲ ಅವಿರೋಧವಾಗಿ ಆಯ್ಕೆಯಾದರು.
ಪಟ್ಟಣದ ಟಿಎಪಿಸಿ ಆಡಳಿತ ಕಛೇರಿಯಲ್ಲಿ ನಡೆದ ಆಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತು ಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ ಇವರ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ಚುನಾವಣಾ ಸಭೆಯಲ್ಲಿ ನಿರ್ದೇಶಕರುಗಳಾದ ಹೆಚ್.ಪಿ.ಪ್ರಶಾಂತ್, ಎಂ.ಎಸ್.ಅನಂತು, ಹೆಚ್.ಎಸ್.ವೆಂಕಟೇಶ್, ಶಂಕರನಾಯಕ, ಮಹದೇವನಾಯಕ, ಸ್ವರೂಪರಾಣಿ, ವನಜಾಕ್ಷಿ, ಕೆಡಗನಟರಾಜು, ದಿನೇಶ್, ಸಹಕಾರ ಇಲಾಖೆ ಎಸ್.ರವಿ ಇದ್ದರು.
ನೂತನ ಅಧ್ಯಕ್ಷ ಎಸ್.ಸಿದ್ದೇಗೌಡ ಮಾತನಾಡಿ ಸಂಘದ ಎಲ್ಲಾ ಸದಸ್ಯರ ವಿಶ್ವಾಸ ಗಳಿಸಿ ರೈತ ಷೇರುದರ ಸದಸ್ಯರಿಗೆ ಸರ್ಕಾರದಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರಲ್ಲದೆ, ಇದರ ಜತೆಗೆ ಸಂಘದ ಮೂಲ ಉದ್ದೇಶಗಳನ್ನು ಈಡೇರಿಸುವುದರ ಜತೆಗೆ ಸಂಘಕ್ಕೆ ಸರ್ಕಾರದಿಂದ ಅನುದಾನ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದರು.

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ ಮಾತನಾಡಿ ಟಿಎಪಿಸಿಎಂಎಸ್ ಇತಿಹಾಸದಲ್ಲಿ 12 ಕ್ಕೆ 12 ಸ್ಥಾನ ಕಾಂಗ್ರೆಸ್ ಸದಸ್ಯರು ಬರುವುದಕ್ಕೆ ಕಾರಣರಾದ ಪಕ್ಷದ ಕಾರ್ಯಕರ್ತರು ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಶಾಸಕ ಡಿ.ರವಿಶಂಕರ್ ಮಾತನಾಡಿ ಟಿಎಪಿಸಿಎಂಎಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳು ಸದಸ್ಯರ ವಿಶ್ವಾಸ ಗಳಿಸಿ ಸಂಘದ ಮೂಲ ಉದ್ದೇಶವನ್ನು ಪೂರೈಸುವ ಕೆಲಸವನ್ನು ಮಾಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಸಿ.ಪಿ.ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಎಂ.ಎಸ್ ಮಹದೇವ್, ಉದಯ ಶಂಕರ್ ವಕ್ತಾರ ಸೈಯದ್ ಜಾಬೀರ್, ಮುಖಂಡರಾದ ತಿಪ್ಪೂರು ರವಿ, ಮಹದೇವನಾಯಕ, ವಕೀಲ ಪುನೀತ್, ಎಂಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ದಿನೇಶ್, ಬ್ಯಾಡರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಸಚಿನ್, ತಿಪ್ಪೂರು ವಿಎಸ್ ಎಸ್ ಎನ್ ಸಿಇಒ ಮಹದೇವ್, ಟಿಎಪಿಸಿಎಂಎಸ್ ಕಾರ್ಯದರ್ಶಿ ರವಿ, ಸಿಬ್ಬಂದಿ ನಟರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.,







