LatestMysore

ಲಕ್ಷ್ಮಣತೀರ್ಥ ನದಿ ಶುದ್ದೀಕರಣ, ಸಾರ್ವಜನಿಕ ಆಸ್ಪತ್ರೆ ಉದ್ಘಾಟನೆಗೆ ಸಹಕರಿಸಿ: ಹೆಚ್.ಪಿ.ಮಂಜುನಾಥ್

ಹುಣಸೂರು(ಮನುಕುಮಾರ್):  ಹುಣಸೂರಿನ ಮಧ್ಯಭಾಗದಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿ ಶುದ್ದೀಕರಣಕ್ಕೆ ಮುಂದಾಗಬೇಕು ಎಂದು ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ನಗರಾಭಿವೃದ್ಧಿ ಹಾಗೂ ಉಸ್ತುವಾರಿ ಸಚಿವ ಯತೀಂದ್ರ ಬಳಿ ಮನವಿ ಮಾಡಿದ್ದಾರೆ.

ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸಿದ ಬಳಿಕ ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಬರ ಪರಿಹಾರ ಕಾಮಗಾರಿಗಳ ಕುರಿತು ಮಾಹಿತಿ ಪಡೆಯುವ ಸಂದರ್ಭದಲ್ಲಿ ತಾಲ್ಲೂಕಿನ ಮುಖ್ಯ ಬೇಡಿಕೆಯಾದ ನಗರದ ಮಧ್ಯ ಭಾಗದಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿ ಶುಧೀಕರಣಕ್ಕೆ ಮುಂದಾಗಬೇಕು.

ನಗರದಲ್ಲಿ ನಿರ್ಮಾಣಗೊಂಡಿರುವ 250 ಹಾಸಿಗೆಗಳ ಸಾಮರ್ಥ್ಯವುಳ್ಳ ಸಾರ್ವಜನಿಕ  ಆಸ್ಪತ್ರೆಯನ್ನು ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಿ ಲೋಕಾರ್ಪಣೆಗೊಳಿಸಬೇಕು ಹಾಗೂ ತಾಲ್ಲೂಕಿನ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಯತೀಂದ್ರ ಅವರಿಗೆ ಮನವಿ ಮಾಡಿದರು.

ಸಿದ್ದರಾಮಯ್ಯನವರ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಹುಣಸೂರಿನಲ್ಲಿ 35 ಕೋಟಿ ರೂ. ವೆಚ್ಚದಡಿ ನಿರ್ಮಿಸಿರುವ ಹೈಟೆಕ್ ಆಸ್ಪತ್ರೆ ಇದೀಗ ಪೂರ್ಣಗೊಂಡಿದ್ದು. ಉದ್ಘಾಟನೆಗೊಂಡಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಪ್ರಶ್ನೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಉದ್ಘಾಟನೆಗೆ ಕ್ರಮವಹಿಸಲಾಗುವುದು ಎಂದು ಸಚಿವ ಯತೀಂದ್ರ ಹೇಳಿದ್ದಾರೆ.

ಹಾಗೆಯೇ ಅರಸು ಭವನ ಉಳಿಕೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಹಾಸ್ಟೆಲ್‌ಗಳಿಗೆ ಪಡಿತರ ಪದಾರ್ಥಗಳು ಸಕಾಲದಲ್ಲಿ ಪೂರೈಕೆಯಾಗದೆ, ನಿತ್ಯ ಅಂಗಡಿಗಳಲ್ಲಿ ಖರೀದಿಸಿ ಅಡುಗೆ ಮಾಡುತ್ತಿರುವ ಬಗ್ಗೆ ಗಮನ ಸೆಳೆದಾಗ ಇದೊಂದು ಗಂಭೀರ ವಿಚಾರವಾಗಿದ್ದು ಮಾಹಿತಿ ಪಡೆದು ಕ್ರಮವಹಿಸುವೆ ಎಂದು ತಿಳಿಸಿದ್ದಾರೆ.

ತಾಲೂಕಿನಲ್ಲಿ ಬೆಂಬಲ ಬೆಲೆ ಮೂಲಕ ಖರೀದಿಸಿರುವ ರಾಗಿ ಬಾಕಿ 36 ಕೋಟಿ ರೂ. ಪಾವತಿಸಲಾಗಿದೆ. ಇನ್ನು 7 ಕೋಟಿ ರೂ. ಮಾತ್ರ ಬಾಕಿ ಇರುವ ಬಗ್ಗೆ ಜಿಲ್ಲಾಧಿಕಾರಿಗಳು  ಮಾಹಿತಿ ನೀಡಿದ್ದಾರೆ. ಸಂಬಂಧಿಸಿದವರೊಂದಿಗೆ ಚರ್ಚಿಸಿ ಬಿಡುಗಡೆ ಮಾಡಲಾಗುವುದೆಂದರು.

ನಗರದ ಹೃದಯ ಭಾಗದಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿ ಸಂಪೂರ್ಣ ಕಲುಷಿತಗೊಂಡಿದೆ. ನದಿಯ ಎರಡೂ ಬದಿ ಎಸ್‌ಟಿಪಿ ಚರಂಡಿ ನಿರ್ಮಿಸಿ  ನದಿಗೆ ಕಲುಷಿತ ನೀರು ಸೇರದಂತೆ ಕ್ರಮವಹಿಸಬೇಕೆಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಮನವಿಗೆ ತಕ್ಷಣವೇ ಸ್ಪಂದಿಸಿದ ಸಚಿವರು, ಈ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯ ಎಂಜಿನಿಯ‌ರ್ ಹೆಗ್ಗಡೆಯವರಿಗೆ ಸೂಚನೆ ನೀಡಿದ್ದೇನೆ ಹಾಗೂ ನಗರದ ಹಳೇ ಸೇತುವೆ ಬಳಿಯ ಪಾಳು ಬಿದ್ದಿರುವ ನಗರಸಭೆ ಚಿತ್ರಮಂದಿರಕ್ಕೆ ಸರಕಾರದ 2 ಇಲಾಖೆಗಳನ್ನು ಸ್ಥಳಾಂತರಿಸುವಂತೆ ಮಂಜುನಾಥ್ ಕೋರಿದ್ದು ಪರಿಶೀಲಿಸಿ ಕ್ರಮವಹಿಸುವಂತೆ ನಗರಸಭೆ ಆಡಳಿತಾಧಿಕಾರಿಯಾದ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆಂದರು.

ಹುಡಾ ಅಧ್ಯಕ್ಷ ಎಚ್.ಪಿ. ಅಮರನಾಥ್, ಮಾಜಿ ಶಾಸಕ ಎಚ್.ಪಿ. ಮಂಜುನಾಥ್, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾ.ಅಧ್ಯಕ್ಷ ರಾಘು, ಅಕ್ರಮ-ಸಕ್ರಮ ಸಮಿತಿ ಸದಸ್ಯ ಕುಮಾರ್, ಅಧಿಕಾರಿಗಳು ಉಪಸ್ಥಿತರಿದ್ದರು.

admin
the authoradmin

Leave a Reply