LatestNews

ಚಿರತೆ ದಾಳಿಗೆ ಕರು ಬಲಿ… ಭಯಭೀತರಾಗಿರುವ ಯರಗಂಬಳ್ಳಿ ಗ್ರಾಮದ ರೈತರು

ಯಳಂದೂರು(ನಾಗರಾಜ ವೈ.ಕೆ.ಮೊಳೆ): ತಾಲ್ಲೂಕಿನ ಯರಗಂಬಳ್ಳಿ ಗ್ರಾಮದ ಜಮೀನಿನಲ್ಲಿ ಕಟ್ಟಿ ಹಾಕಲಾಗಿದ್ದ ಕರುವೊಂದನ್ನು ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ನಡೆದಿದ್ದು, ಗ್ರಾಮಸ್ಥರು ಭಯಭಿತರಾಗಿದ್ದಾರೆ. ಜಾನುವಾರುಗಳನ್ನು ನಂಬಿ ಬದುಕುತ್ತಿರುವ ರೈತರು ಆಗಾಗ್ಗೆ ದಾಳಿ ಮಾಡುವ ವನ್ಯಪ್ರಾಣಿಗಳಿಂದ ಸಂಕಷ್ಟಕ್ಕೀಡಾಗಿದ್ದಾರೆ.

ಇದೀಗ ಯರಗಂಬಳ್ಳಿ ಗ್ರಾಮದ ಶೋಭಾ ಕೋಂ ನಾಗನಾಯಕ ಅವರಿಗೆ ಸೇರಿದ ಸರ್ವೇ ನಂಬರ್‌ 518/6ರ ಜಮೀನಿನಲ್ಲಿ ಕರುವನ್ನು ಕಟ್ಟಿ ಹಾಕಲಾಗಿತ್ತು. ಮುಂಜಾನೆ ವೇಳೆಯಲ್ಲಿ ಚಿರತೆ ದಾಳಿ ನಡೆಸಿದ್ದು, ಕರು ಸ್ಥಳದಲ್ಲೇ ಮೃತಪಟ್ಟಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ರೈತರು ಹಾಗೂ ಜಾನುವಾರುಗಳ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಚಿರತೆ ದಾಳಿಯಿಂದ ಜಾನುವಾರು ಕಳೆದುಕೊಂಡಿರುವ ಕುಟುಂಬಕ್ಕೆ ಅರಣ್ಯ ಇಲಾಖೆ ಹಾಗೂ ಸರ್ಕಾರ ನಿಯಮಾನುಸಾರ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ಚಿರತೆ ಸಂಚಾರದ ಬಗ್ಗೆ ನಿಗಾ ವಹಿಸಿ, ರೈತರ ಜಾನುವಾರುಗಳು ಹಾಗೂ ಬೆಳೆಗಳಿಗೆ ರಕ್ಷಣೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಾಡುಪ್ರಾಣಿಗಳ ಹಾವಳಿ ಕುರಿತು ಮೇಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತರು ಮನವಿ ಮಾಡಿದ್ದಾರೆ.

admin
the authoradmin

Leave a Reply