LatestMysore

ಪದವಿ ಪೂರ್ವ ವಿದ್ಯಾರ್ಥಿಗಳಿಗೆ ತ್ವರಿತ ಪಠ್ಯ ಪುಸ್ತಕ ವಿತರಣೆಗೆ ಸರ್ಕಾರಕ್ಕೆ ಆಗ್ರಹ

ಮೈಸೂರು: ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪದವಿ ಪೂರ್ವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೊಂದಿಗೆ ಚೆಲ್ಲಾಟವಾಡದೆ ತ್ವರಿತವಾಗಿ ಮಕ್ಕಳಿಗೆ ಪಠ್ಯ ಪುಸ್ತಕ ವಿತರಣೆ ಮಾಡಿ ಎಂದು ಸರ್ಕಾರಕ್ಕೆ ಕರ್ನಾಟಕ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಚಂದ್ರು ಮಂಡ್ಯ ಒತ್ತಾಯಿಸಿದ್ದಾರೆ

ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಪಠ್ಯಪುಸ್ತಕಗಳನ್ನು ನೀಡುವುದಾಗಿ ಘೋಷಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದರೂ, ರಾಜ್ಯದ ಹಲವು ಕಾಲೇಜುಗಳ ವಿದ್ಯಾರ್ಥಿಗಳಿಗೆ ಇದುವರೆಗೆ ಪಠ್ಯಪುಸ್ತಕಗಳು ಸಮರ್ಪಕವಾಗಿ ವಿತರಣೆ ಆಗದಿರುವುದು ಅತ್ಯಂತ ಖಂಡನೀಯವಾಗಿದೆ.

ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಲಭ್ಯವಾಗಬೇಕಿತ್ತು. ಆದರೆ ಸರ್ಕಾರದ ವಿಳಂಬ ನೀತಿಯಿಂದ ವಿದ್ಯಾರ್ಥಿಗಳು ಪಠ್ಯಕ್ರಮವನ್ನು ಸರಿಯಾಗಿ ಅಧ್ಯಯನ ಮಾಡಲು ತೊಂದರೆ ಅನುಭವಿಸುವಂತಾಗಿದೆ. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳು ಪಠ್ಯಪುಸ್ತಕಗಳನ್ನು ಸ್ವಂತ ಹಣದಲ್ಲಿ ಖರೀದಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸರ್ಕಾರ ಉಚಿತ ಶಿಕ್ಷಣಕ್ಕೆ ಆದ್ಯತೆ ನೀಡುತ್ತೇವೆ ಎಂದು ಹೇಳುವುದರ ಜೊತೆಗೆ, ವಿದ್ಯಾರ್ಥಿಗಳಿಗೆ ಅಗತ್ಯವಾದ ಪಠ್ಯಪುಸ್ತಕಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ಜವಾಬ್ದಾರಿಯನ್ನೂ ನಿರ್ವಹಿಸಬೇಕು. ಪಠ್ಯಪುಸ್ತಕ ವಿತರಣೆ ವಿಳಂಬವಾಗುತ್ತಿರುವುದಕ್ಕೆ ಕಾರಣವೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು.

ಆದ್ದರಿಂದ ಸರ್ಕಾರ ಕೂಡಲೇ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಅಗತ್ಯ ಪ್ರಮಾಣದ ಉಚಿತ ಪಠ್ಯಪುಸ್ತಕಗಳನ್ನು ಪೂರೈಸಿ, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ವಿಳಂಬ ಮರುಕಳಿಸದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು.

ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡದೆ, ತಕ್ಷಣ ಪಠ್ಯಪುಸ್ತಕ ವಿತರಣೆ ಪೂರ್ಣಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ

admin
the authoradmin

Leave a Reply