janamanakannada > Blog > Crime > ಹೊಸ ರಾಮನಹಳ್ಳಿ ಸಮೀಪ ಟಿಪ್ಪರ್ -ಬೈಕ್ ನಡುವೆ ಡಿಕ್ಕಿ… ಇಬ್ಬರು ಯುವಕರ ಕಾಲು ಮುರಿತ
ಹುಣಸೂರು(ಹಿರಿಕ್ಯಾತನಹಳ್ಳಿ ಸ್ವಾಮಿಗೌಡ): ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು, ಕಾಲು ಮುರಿತಕ್ಕೊಳಗಾಗಿರುವ ಘಟನೆ ಹುಣಸೂರು ತಾಲ್ಲೂಕಿನ ಬಿಳಿಕೆರೆ–ಕೆ.ಆರ್.ನಗರ ಮುಖ್ಯ ರಸ್ತೆಯ ಹೊಸ ರಾಮನಹಳ್ಳಿ ಸಮೀಪ ಗುರುವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಬಿಳಿಕೆರೆ ಪಟ್ಟಣದ ಮಧು (ಚಿಕ್ಕವೀರ ನಾಯಕ ಅವರ ಪುತ್ರ) ಹಾಗೂ ಶಿವಕುಮಾರ್ (34) ಗಾಯಗೊಂಡಿದ್ದಾರೆ. ಇಬ್ಬರಿಗೂ ಕಾಲು ಮುರಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬಿಳಿಕೆರೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ಟಿಪ್ಪರ್ ಮತ್ತು ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
admin










