LatestMysore

ಮೈಸೂರಿನ ಹಿಂದೂಸ್ಥಾನ್ ಕಾಲೇಜಿನಲ್ಲಿ ಮೆಂಟಲ್ ಹೆಲ್ತ್ ಕ್ಲಬ್ ಉದ್ಘಾಟನೆ… ಮಾನಸಿಕ ಆರೋಗ್ಯ ಅತ್ಯಗತ್ಯ

ಮೈಸೂರು: ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಹಿಂದೂಸ್ಥಾನ್ ಕಾಲೇಜಿನಲ್ಲಿ ಮೆಂಟಲ್ ಹೆಲ್ತ್ ಕ್ಲಬ್ ಅನ್ನು ಉದ್ಘಾಟಿಸಲಾಯಿತು.

ವಿವೇಕವಂಶಿ ಫೌಂಡೇಷನ್‌ ನ ಸಂಸ್ಥಾಪಕರಾದ ನಿತ್ಯಾನಂದ ಎಸ್.ಬಿ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮೆಂಟಲ್ ಹೆಲ್ತ್ ಕ್ಲಬ್ ಉದ್ಘಾಟಿಸುವುದರೊಂದಿಗೆ ಹಾಗೂ ವಿಶೇಷ ಉಪನ್ಯಾಸವಾಗಿ. ಮಾತನಾಡಿದ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಮಾನಸಿಕ ಆರೋಗ್ಯ ಅತ್ಯಗತ್ಯ. ಸಕಾರಾತ್ಮಕ ಚಿಂತನೆ, ಆಧ್ಯಾತ್ಮಿಕ ಸದ್ವಿಚಾರಗಳು, ಭಾವನಾತ್ಮಕ ಸಮತೋಲನ ಹಾಗೂ ಒತ್ತಡ ನಿರ್ವಹಣೆಯ ಮೂಲಕ ಸಂತೃಪ್ತ ಜೀವನ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.

‘ಆರೋಗ್ಯಕರ ಮನಸ್ಸು – ಸಂತೋಷದ ಜೀವನ’ ಎಂಬ ಆಶಯದೊಂದಿಗೆ ಆರಂಭಗೊಂಡಿರುವ ಈ ಕ್ಲಬ್ ಬೋಧರು, ಬೋಧಕೇತರರು ಹಾಗೂ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮಾನಸಿಕ ಜಾಗೃತಿ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುವ ಗುರಿ ಹೊಂದಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿ.ಜೆ. ಪ್ರಿಯಾ, ಸಮಿತಿ ಸಂಯೋಜಕರು ಹಾಗೂ ಸಹ ಪ್ರಾಧ್ಯಾಪಕರಾದ ಡಾ. ಸುನೀತಾ, ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ವಿನಂತಿ, ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಪರಮೇಶ ಕೆ. ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಶೇಷ ಉಪನ್ಯಾಸ ಕಾರ್ಯಕ್ರಮ ಮುಕ್ತಾಯವಾದ ಮೇಲೆ ಬೋಧಕರು ಹಾಗೂ ಬೋಧಕೇತರರಿಗೆ ವಿವಿಧ ಆಟೋಟಗಳನ್ನು ಆಯೋಜಿಸಲಾಗಿತ್ತು. ಆಟೋಟಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು.

admin
the authoradmin

ನಿಮ್ಮದೊಂದು ಉತ್ತರ