News

ಕುಶಾಲನಗರದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ, ಕಲೋತ್ಸವದಲ್ಲಿ ಮಕ್ಕಳ ಪ್ರತಿಭೆ ಅನಾವರಣ..

ಕುಶಾಲನಗರ(ರಘುಹೆಬ್ಬಾಲೆ): ವಿದ್ಯಾರ್ಥಿಗಳ  ಸರ್ವತೋಮುಖ ಅಭಿವೃದ್ಧಿಗೆ ಮತ್ತು ಅವರ ಸುಪ್ತ  ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಂತಹ ಕಾರ್ಯಕ್ರಮಗಳು ಉತ್ತಮ ಸಹಕಾರಿಯಾಗಿದೆ ಎಂದು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಇಂತಹ ಕಾರ್ಯಕ್ರಮಗಳು ನೆರವಾಗುತ್ತದೆ. ಎಲ್ಲ ಮಕ್ಕಳು ಸಮರ್ಥರು, ಎಲ್ಲರಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅವುಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ನಮ್ಮ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು. ಸೋಲು-ಗೆಲುವು ಮುಖ್ಯವಲ್ಲ, ಬದಲಾಗಿ ಮಕ್ಕಳು ಭಾಗವಹಿಸುವುದು ಮುಖ್ಯ ಎಂದರು.

ನಮ್ಮ ಕೊಡಗು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ನಮ್ಮ ವಿದ್ಯಾರ್ಥಿಗಳಿಗೆ ತೀರ್ಪುಗಾರರು ಅತ್ಯುತ್ತಮವಾದ ತೀರ್ಪನ್ನು ನೀಡಿ ನಿಷ್ಪಕ್ಷವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ(ಆಡಳಿತ) ಉಪ ನಿರ್ದೇಶಕ ಬಸವರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ,  ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಉತ್ತಮವಾದ ವೇದಿಕೆಯಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳು  ವಿವಿಧ ಸ್ಪರ್ಧಾ ವಿಭಾಗಗಳಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಲು ಇಂತಹ ಕಾರ್ಯಕ್ರಮಗಳು ಪೂರಕವಾಗಿದೆ ಎಂದು ಹೇಳಿದರು.

ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕಿ ಕೆ.ಆರ್.ಬಿಂದು ಮಾತನಾಡಿ, ಒಂದರಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದವರಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಐದರಿಂದ ಏಳನೇ ತರಗತಿ ಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಎಂಟರಿಂದ ಹನ್ನೆರಡನೇ ತರಗತಿ ವಿದ್ಯಾರ್ಥಿಗಳು ಗುಂಪು ಸ್ಪರ್ಧೆ ಮತ್ತು ವೈಯಕ್ತಿಕ ಸ್ಪರ್ಧೆಗಳಲ್ಲಿ  ಜಿಲ್ಲಾಮಟ್ಟದಲ್ಲಿ ವಿಜೇತರಾದವರು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ ಎಂದರು.

ಈ ಸಂದರ್ಭ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಎಚ್.ಪಿ. ಮಂಜುನಾಥ್ ,ಜಿಲ್ಲಾ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲ್ಲೂಕು ಅಧ್ಯಕ್ಷ ಬಸವರಾಜು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜಿ.ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ,ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಉಪ ನಿರ್ದೇಶಕರ ಕಚೇರಿಯ ಅಧಿಕಾರಿ ಸೌಮ್ಯ, ಶರ್ಮಿಳ.

ಕೊಡಗು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಕಾಲೇಜಿನ ಉಪ ಪ್ರಾಂಶುಪಾಲ ಎ.ಸಿ.ಮಂಜುನಾಥ್, ಕೂಡಿಗೆ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಸ್.ಎ.ಯೋಗೇಶ್,ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ.ಕುಮಾರ್,ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಾಣೇಶ್ ಮತ್ತಿತರರು ಪಾಲ್ಗೊಂಡಿದ್ದರು. ನಂತರ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.

admin
the authoradmin

ನಿಮ್ಮದೊಂದು ಉತ್ತರ

Translate to any language you want