ಕುಶಾಲನಗರ (ರಘುಹೆಬ್ಬಾಲೆ): ಸರ್ಕಾರಿ ಶಾಲೆಗಳ ಉಳಿವಿಗಾಗಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸುವಂತೆ ಮಾಜಿ ಶಾಸಕ ಎಂ ಪಿ ಅಪ್ಪಚ್ಚುರಂಜನ್ ಸರ್ಕಾರಕ್ಕೆ ಸಲಹೆ ನೀಡಿದರು.
ತಾಲ್ಲೂಕಿನ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2022 -23 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯಿತಿಯ ರೂ. 27 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ವಿವೇಕ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.

ವಿ.ಪಿ.ಶಶಿಧರ್ ಮಾತನಾಡಿ, ಶಿಕ್ಷಣ ಇಲಾಖೆಯ ಅಭಿವೃದ್ಧಿ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಮೂಲಭೂತ ಸೌಕರ್ಯಗಳೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಒದಗಿಸಲಾಗುತ್ತಿದೆ.ವಿದ್ಯಾದೇಗುಲ ರಾಜಕೀಯ ವೇದಿಕೆ ಆಗದಿರಲಿ ಎಂದು ಹೇಳಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಸಿ.ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ರೂಪಮಹೇಶ್,ಸದಸ್ಯರಾದ ಸಾವಿತ್ರಿ, ಶಿವಕುಮಾರ್, ಕೆ.ಬಿ.ದೇವರಾಜು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಬಿ.ಜಗದೀಶ್, ನಿರ್ದೇಶಕರಾದ ಕೆ.ಎಸ್.ಕೃಷ್ಣೇಗೌಡ, ಅಳುವಾರದ ಮೂರ್ತಿ, ಎಪಿಸಿಎಂಎಸ್ಸಿ ನಿರ್ದೇಶಕ ಎಚ್.ಬಿ.ಚಂದ್ರಪ್ಪ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಟಿ.ಕೆ.ಪಾಂಡುರಂಗ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಮುಖ್ಯ ಶಿಕ್ಷಕಿ ಜಿ.ಎನ್.ಭಾಗ್ಯ ಲಕ್ಷ್ಮೀ, ಶಿಕ್ಷಕರಾದ ಅನಿಲ್ , ಮಾಲತೇಶ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.








