ಜ 24 ರಂದು ನಡೆಯಲಿರುವ ಮಕ್ಕಳ ಸಾಂಸ್ಕೃತಿಕ ಉತ್ಸವದಲ್ಲಿ ಸಾಧಕರಿಗೆ ಗಾಂಧಿ ಸದ್ಭಾವನಾ ಪ್ರಶಸ್ತಿ ಪ್ರದಾನ

ಮೈಸೂರು : ಅದಮ್ಯ ರಂಗಶಾಲೆಯ ವತಿಯಿಂದ ನೀಡಲಾಗುವ ನಾಲ್ಕನೆಯ ವರ್ಷದ ‘ಗಾಂಧಿ ಸದ್ಬಾವನಾ ಪ್ರಶಸ್ತಿ’ಗೆ ಸಾಹಿತ್ಯ, ಪತ್ರಿಕೋದ್ಯಮ, ಶಿಕ್ಷಣ, ಸಾರ್ವಜನಿಕ ಆಡಳಿತ ಕ್ಷೇತ್ರದ ನಾಲ್ಕು ಮಂದಿ ಗಣ್ಯ ಸಾಧಕರು ಆಯ್ಕೆಯಾಗಿದ್ದಾರೆ ಎಂದು ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ಅವರು ತಿಳಿಸಿದ್ದಾರೆ.
ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ಆವೃತ್ತಿಯ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ, ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಹಾಗೂ ಲೇಖಕಿ ಪ್ರೊ. ಷಹಸೀನಾ ಬೇಗಂ, ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯ ಪೊಲೀಸ್ ಉಪಾಧೀಕ್ಷಕ (ಡಿವೈ.ಎಸ್.ಪಿ.) ಸಿ. ಕಿರಣ್ ಕುಮಾರ್ ಹಾಗೂ ಹುಣಸೂರಿನ ಶಾಸ್ತ್ರೀ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಎಲ್. ರವಿಶಂಕರ್ ಪ್ರಸ್ತುತ ಸಾಲಿನ ‘ಗಾಂಧಿ ಸದ್ಭಾವನಾ ಪ್ರಶಸ್ತಿ’ಗೆ ಆಯ್ಕೆಯಾಗಿರುವ ಸಾಧಕ ಗಣ್ಯರಾಗಿದ್ದಾರೆ.

ಜ.24ರಂದು ಮಧ್ಯಾಹ್ನ2.30ಗಂಟೆಗೆ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ‘ಮಕ್ಕಳ ಸಾಂಸ್ಕೃತಿಕ ಉತ್ಸವ’ದಲ್ಲಿ ಈ ಗಣ್ಯ ಸಾಧಕರಿಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಪದ್ಮಾ ಶೇಖರ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷೆ ಡಾ. ಕವಿತಾ ರೈ ಸಮಾರಂಭ ಉದ್ಘಾಟಿಸಲಿದ್ದು, ಕರ್ನಾಟಕ ಮಾಹಿತಿ ಆಯೋಗದ ನಿಕಟಪೂರ್ವ ಆಯುಕ್ತ ಕೆ.ಎಂ. ಚಂದ್ರೇಗೌಡ ಅಧ್ಯಕ್ಷತೆ ವಹಿಸುವರು. ಅದಮ್ಯ ರಂಗಶಾಲೆಯ ಗೌರವ ಕಾರ್ಯದರ್ಶಿ ಟಿ. ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು.
ಮುಖ್ಯ ಅತಿಥಿಗಳಾಗಿ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜು, ಹಿರಿಯ ಸಾಹಿತಿ ಮತ್ತು ಅಂಕಣಕಾರ ಮಿರ್ಲೆ ಚಂದ್ರಶೇಖರ, ಗಿರೀಶ್ ಎಂಟ ರ್ ಪ್ರೈಸಸ್ ಮಾಲೀಕ ಎನ್.ಎಲ್. ಗಿರೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಧ್ಯಾಹ್ನ 3.30ರಿಂದ 4.30ರವರೆಗೆ ಪ್ರತಿಭಾವಂತ ಮಕ್ಕಳಿಂದ ಸಾಂಸ್ಕೃತಿಕ ಉತ್ಸವ ನಡೆಯಲಿದ್ದು, ಜಿಲ್ಲೆಯ ವಿವಿಧ ಶಾಲೆಯ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಲಿದ್ದಾರೆ.

ಸಂಜೆ 4-30 ಗಂಟೆಗೆ ‘ಅದಮ್ಯ ಚಿಗುರು – ಪ್ರತಿಭಾ ಚೇತನ ಪ್ರಶಸ್ತಿ’ ಹಾಗೂ ‘ಸ್ವಾಮಿ ವಿವೇಕಾನಂದ ಸಮಾಜಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು. ಹಿರಿಯ ಜಾನಪದ ವಿದ್ವಾಂಸ ಡಾ.ಪಿ.ಕೆ. ರಾಜಶೇಖರ ಅವರು ವಿವಿಧ ಕ್ಷೇತ್ರದ ಸಾಧಕರಿಗೆ ‘ಸ್ವಾಮಿ ವಿವೇಕಾನಂದ ಸಮಾಜಸೇವಾ ಪ್ರಶಸ್ತಿ’ ಪ್ರದಾನ ಮಾಡುವರು. ಪುರಸ್ಕೃತರನ್ನು ಕುರಿತು ಸಾಹಿತಿ ಟಿ. ಸತೀಶ್ ಜವರೇಗೌಡ ಅಭಿನಂದನ ನುಡಿಗಳನ್ನಾಡುವರು.
ಜಿಲ್ಲೆಯ ವಿವಿಧ ಶಾಲೆಗಳ ಬಹುಮುಖ ಪ್ರತಿಭೆಯ ವಿದ್ಯಾರ್ಥಿ ಸಾಧಕರಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಹಾಗೂ ಚಾಮರಾಜನಗರ ಜಿಲ್ಲೆಯ ಲೋಕಾಯುಕ್ತ ಉಪಾಧೀಕ್ಷಕ (ಡಿವೈ.ಎಸ್.ಪಿ.) ಜಿ.ಎಸ್. ಗಜೇಂದ್ರ ಪ್ರಸಾದ್ ಅವರು ‘ಅದಮ್ಯ ಚಿಗುರು – ಪ್ರತಿಭಾ ಚೇತನ ಪ್ರಶಸ್ತಿ’ ಪ್ರದಾನ ಮಾಡುವರು.

ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪಿ. ಪ್ರಶಾಂತ್ ಗೌಡ, ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ನಾಗರಾಜು ವಿ. ಬೈರಿ, ಗುಬ್ಬಿವಾಣಿ ಟ್ರಸ್ಟಿನ ಅಧ್ಯಕ್ಷೆ ಮಾಲವಿಕ ಗುಬ್ಬಿವಾಣಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಸ್ .ಬಿ .ಸತೀಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸ್ವಾಮಿ ವಿವೇಕಾನಂದ ಸಮಾಜ ಸೇವ ಪ್ರಶಸ್ತಿ ಪುರಸ್ಕೃತರು
ವಿವಿಧ ಜಿಲ್ಲೆಗಳ ವಿವಿಧ ಕ್ಷೇತ್ರದ ಸಾಧಕರಾದ ವಿಜಯವಾಣಿ ದಿನಪತ್ರಿಕೆಯ ಮೈಸೂರಿನ ಹಿರಿಯ ವರದಿಗಾರ ಅವಿನಾಶ್ ಜೈನಹಳ್ಳಿ, ಮೈಸೂರಿನ ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎನ್. ಸಂತೋಷ್ ಕುಮಾರ್, ಸಾಹಿತಿ ಮತ್ತು ಉಪನ್ಯಾಸಕರಾದ ನಾಗಮಂಗಲದ ಡಾ. ನೀ.ಗೂ. ರಮೇಶ್ ಮತ್ತು ತಿಪಟೂರಿನ ಗಂಗಾಧರ ಎಸ್. ಕದ್ರಿ, ಮೈಸೂರಿನ ಕುವೆಂಪು ನಗರದ ಬಿಜಿಎಸ್ ಬಿ.ಇಡಿ. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಪುಸ್ತಕ ಸಂಗ್ರಾಹಕ ಡಾ.ಹೆಚ್.ಬಿ. ಬೆಟ್ಟಸ್ವಾಮಿ.

ನಂಜನಗೂಡಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎನ್. ಚಂದ್ರಶೇಖರ ಬಾಬು, ತಿಪಟೂರಿನ ಟೈಮ್ಸ್ ಪಿಯು ಕಾಲೇಜಿನ ಆಡಳಿತಾಧಿಕಾರಿ. ಕೆ.ಎಲ್. ಅನೂಪ್, ಹೆಚ್.ಡಿ. ಕೋಟೆಯ ಸೇಂಟ್ ಮೇರಿಸ್ ಪಿಯು ಕಾಲೇಜಿನ ಪ್ರಾಂಶುಪಾಲ ಸಂತೋಷ್ ಕುಮಾರ್, ಕೆ.ಆರ್. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಎಂ. ಕೃಷ್ಣ ಬನ್ನಹಳ್ಳಿ, ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಸಿ. ಅನಿತಾ ಅವರು ರಾಜ್ಯ ಮಟ್ಟದ ‘ಸ್ವಾಮಿ ವಿವೇಕಾನಂದ ಸಮಾಜಸೇವಾ ಪ್ರಶಸ್ತಿ’ಗೆ ಆಯ್ಕೆಯಾಗಿರುವ ಗಣ್ಯ ಸಾಧಕರಾಗಿದ್ದು, ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸುವರು.







