CrimeLatest

ಕುಶಾಲನಗರದ  ಆನೆಕಾಡು ಬಳಿ ಹೊತ್ತಿ ಉರಿದ ಕಾರು.. ಪ್ರಾಣಾಪಾಯದಿಂದ ಪಾರಾದ ಚಾಲಕ

ಕುಶಾಲನಗರ : ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಕಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಗೆ ಸೇರಿದ ಕಾರು ಬೆಂಕಿಯಿಂದ ಸಂಪೂರ್ಣ ಹಾನಿಯಾಗಿದೆ. ಮಜೀದ್ ಅವರು  ಉಡುಪಿಯಿಂದ ಮೈಸೂರಿಗೆ ತೆರಳುವಾಗ ಈ ಘಟನೆ ಸಂಭವಿಸಿದೆ.

ಅಪಾಯ ಅರಿತ ಕಾರ್ ಚಾಲಕ ಸೂಚನೆಯಂತೆ ಮಜೀದ್ ಅವರು ಕಾರಿನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.ವಿಷಯ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ‌ ಬೆಂಕಿ ನಂದಿಸಿದ್ದಾರೆ.

ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ?

admin
the authoradmin

Leave a Reply