LatestMysore

ಕಟ್ಟೆಮಳಲವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ

ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ):  ತಾಲ್ಲೂಕಿನ ಕಟ್ಟೆಮಳಲವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು  ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಮಕ್ಕಳು ವೈಜ್ಞಾನಿಕ ಮನೋಭಾವನೆ ಮತ್ತು ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು. ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ‘ಫಲಿತಾಂಶ ಪಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮೈಸೂರಿನ ಪರಿಸರ ವಿಜ್ಞಾನಿಗಳಾದ ಶಿವಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಮೂಢನಂಬಿಕೆ ಮತ್ತು ಅಂಧ ಕಾರವನ್ನು ತೊರೆದು ಉತ್ತಮ ವಿದ್ಯಾಭ್ಯಾಸಮಾಡಿ ಗುರಿಯನ್ನು ಸಾಧಿಸಬೇಕು. ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಬಿಆರ್‌ಪಿ ಸೋಮಶೇಖರ್ ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಕೆ.ಚಂದ್ರ, ಇಸಿಒ ಜಯಪ್ರಕಾಶ್, ಮುಖ್ಯ ಶಿಕ್ಷಕಿ ಸುಮಾರಾಣಿ, ಸಹ ಶಿಕ್ಷಕರು, ಎಸ್‌ಡಿಎಂಸಿ ಉಪಾಧ್ಯಕ್ಷೆ ವಿಶಾಲಾಕ್ಷಿ, ದೇವೇಂದ್ರ ಕುಳವಾಡಿ, ಅಶೋಕ್‌, ಶಿವು, ಸೋಮು ಭಾಗವಹಿಸಿದ್ದರು. ವಿಜ್ಞಾನ ಶಿಕ್ಷಕರಾದ ಹೇಮಪ್ರಸಾದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲೆಯ ಮಕ್ಕಳು ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಿದ್ದರು.

admin
the authoradmin

Leave a Reply

Translate to any language you want