ಮೈಸೂರು: ನೇಗಿಲ ಯೋಗಿ ಸಮಾಜ ಸೇವಾ ಟ್ರಸ್ಟ್ ಹಾಗೂ ನೇಗಿಲ ಯೋಗಿ ಮಹಿಳೆಯರ ಹಿತೈಷಿಗಳ ಸೇವಾ ಬಳಗದ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.22ರಂದು ಭಾನುವಾರ ಬೆಳಿಗ್ಗೆ 10ಗಂಟೆಗೆ ಜಯನಗರದಲ್ಲಿರುವ ಮರುಳೇಶ್ವರ ನೇಗಿಲಯೋಗಿ ಭವನದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಕಾರ್ಯಕ್ರಮದ ಅಂಗವಾಗಿ ಮಹಿಳೆಯರ ಪ್ರತಿಭೆಯನ್ನು ಉತ್ತೇಜಿಸುವ ಹಾಗೂ ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನೇಗಿಲಯೋಗಿ ಮಹಿಳೆಯರ ಹಿತೈಷಿಗಳ ಸೇವಾ ಬಳಗದ ವತಿಯಿಂದ ವಿವಿಧ ರೀತಿಯ ಸ್ಪರ್ಧೆಗಳು, ನೃತ್ಯ, ಭಾವಗೀತೆ, ಭರತನಾಟ್ಯ ಮುಂತಾದ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಿವೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡ್ಯ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಡಾ. ವಿ. ಜೆ. ಶೋಭಾರಾಣಿ, ಐಪಿಎಸ್ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೇಗಿಲಯೋಗಿ ಮಹಿಳೆಯರ ಹಿತೈಷಿಗಳ ಸೇವಾ ಬಳಗದ ಅಧ್ಯಕ್ಷರಾದ ಶ್ರೀಮತಿ ಶೋಭ ರಮೇಶ್ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾಗಿ ಡಾ. ಶ್ವೇತ ಸದಾನಂದ್, ಎಂ ಬಿ ಬಿ ಎಸ್, ಎಂ ಡಿ, ಅಸೋಸಿಯೇಟ್ ಪ್ರೊಫೆಸರ್, ಎಂ ಎಂ ಸಿ, ಮೈಸೂರು ಹಾಗೂ ಮೈಸೂರು ಜಿಲ್ಲೆಯ ಸಂಧ್ಯಾಮಂಜುನಾಥ್ , 3ನೇ ಜೆ ಎಂ ಎಫ್ ಸಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕರು (ಎಪಿಪಿ) ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಅತಿಥಿಗಳು ಮಹಿಳೆಯರ ಒಗ್ಗಟ್ಟು, ಸಮಾಜ ಸೇವೆಯಲ್ಲಿ ಅವರ ಪಾತ್ರ, ಮಹಿಳಾ ಸಂಘಟನೆಗಳ ಅಗತ್ಯತೆ ಹಾಗೂ ಜಾಗೃತಿ ಕುರಿತು ಪ್ರೇರಣಾದಾಯಕ ಸಂದೇಶಗಳನ್ನು ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮಹಿಳೆಯರು, ಹಾಗೂ ಮಾಧ್ಯಮ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಗಿದೆ.








