ಮೈಸೂರು: ದಕ್ಷ ಪ್ರಥಮ ದರ್ಜೆ ಕಾಲೇಜಿನಲ್ಲಿ “ಶಿಕ್ಷಕರಿಗಾಗಿ ಸಾಫ್ಟ್ ಸ್ಕಿಲ್ಸ್” ವಿಷಯದ ಕುರಿತು ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (FDP) ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವು ಶಿಕ್ಷಕರ ವೃತ್ತಿಪರ ಸಾಮರ್ಥ್ಯಗಳನ್ನು ವೃದ್ಧಿಪಡಿಸುವುದು ಹಾಗೂ ಪರಸ್ಪರ ಸಂವಹನ ಕೌಶಲ್ಯಗಳನ್ನು ಬಲಪಡಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಖ್ಯಾತ ಶಿಕ್ಷಣ ತಜ್ಞರಾದ ಡಾ. ಐಶಾ ಎಂ. ಶೆರಿಫ್ ಅವರು ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿ, ಯುವ ಮನಸ್ಸುಗಳಿಗೆ ಪರಿಣಾಮಕಾರಿ ಮಾರ್ಗದರ್ಶನ ನೀಡುವ ವಿಧಾನಗಳು ಹಾಗೂ ಶಿಕ್ಷಕ ವೃತ್ತಿಗೆ ಅಗತ್ಯವಾದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.
ಅಲ್ಲದೆ ತಮ್ಮ ಉಪನ್ಯಾಸದಲ್ಲಿ ಶಿಕ್ಷಕರ ಪ್ರಮುಖ ಜವಾಬ್ದಾರಿಗಳಲ್ಲಿ ಮೆಂಟರಿಂಗ್‌ನ ಮಹತ್ವವನ್ನು ಒತ್ತಿಹೇಳಿದರಲ್ಲದೆ, ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ವಿಧಾನಗಳನ್ನು ವಿವರಿಸಿದ ಅವರು, ಕುತೂಹಲ ಮೂಡಿಸುವ ಮತ್ತು ಚಿಂತನೆಗೆ ಉತ್ತೇಜನ ನೀಡುವ ಕಲಿಕಾ ಅನುಭವಗಳನ್ನು ರೂಪಿಸುವ ಅಗತ್ಯವಿದೆ.

ಅರ್ಥಪೂರ್ಣ ಬೋಧನೆ ಎಂದರೆ ಕೇವಲ ವಿಷಯ ಬೋಧನೆಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಕುತೂಹಲವನ್ನು ಬೆಳೆಸುವುದು, ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಬೌದ್ಧಿಕ ಬೆಳವಣಿಗೆಗೆ ದಾರಿಯನ್ನಿರಿಸುವುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪೂಜಾ ಜೋಶಿ ಸೇರಿದಂತೆ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.








