LatestMysore

ದ್ವಿತೀಯ ಪಿಯುಸಿಯಲ್ಲಿ ಹುಣಸೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಯೋಗೇಶ್ ಗೆ ಅಭಿನಂದನೆ ಸಲ್ಲಿಕೆ

 ಹುಣಸೂರು(ಹಿರಿಕ್ಯಾತನಹಳ್ಳಿ ಸ್ವಾಮಿಗೌಡ): ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬಡತನ ಹಾಗೂ ಆರ್ಥಿಕ ಸ್ಥಿತಿಗತಿ ಎಂದಿಗೂ ಸಮಸ್ಯೆಯಾಗಲಾಗುವುದಿಲ್ಲ ಯೋಗೇಶ್  ದ್ವಿತೀಯ ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ಸಾಧನೆ ಮಾದರಿಯಾಗಿದೆ ಎಂದು ಶಾಸಕ ಜಿ ಡಿ ಹರೀಶ್ ಗೌಡ ರವರ ಪತ್ನಿ ವರ್ಷ ಹರೀಶ್ ಗೌಡ  ತಿಳಿಸಿದರು.

ತಾಲ್ಲೂಕಿನ ಕಲ್ಕುಣಿಕೆಯ ಮೇದರ ಬೀದಿರ ಆಟೋ ಡ್ರೈವರ್ ಶಿವಕುಮಾರ್ ರವರ ಪಟ್ಟಣದ ಶಾಸ್ತ್ರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಯೋಗೇಶ್ ಅವರನ್ನು ಅಭಿನಂದಿಸಿ ಅವರು ಮಾತನಾಡಿ, ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಬಹುತೇಕ ಮಂದಿ ಗ್ರಾಮೀಣ ಭಾಗದಿಂದ ಬಂದಂತಹ ವಿದ್ಯಾರ್ಥಿಗಳೇ ಆಗಿದ್ದಾರೆ ಎಂದರು.

ಬಡತನ, ಆರ್ಥಿಕ ಸಂಕಷ್ಟ ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳಿಗೆ ಹೆದರದೆ ಕೆಚ್ಚೆದೆಯಿಂದ ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದಾರೆ. ಅದಕ್ಕೆ ಪೂರಕವಾಗಿ ಛಲದಿಂದ ಬದುಕು ಸಾಗಿಸಿ ಪದವಿ ಪಡೆದು ಅವರ ವಿಶಿಷ್ಟ ಸಾಧನೆಗೆ ಮಾಡಬಹುದು ಇದಕ್ಕೆ ಉದಾಹರಣೆ ಯೊಗೇಶ್ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಆ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾದ ಯೊಗೇಶ್ ಅವರ ಬದುಕು ಮಾದರಿಯಾಗಿದೆ. ಅವರ ಸಾಧನೆ ಜನ್ಮ ನೀಡಿದ ಪೋಷಕರು ಹಾಗೂ ವಿದ್ಯಾಭ್ಯಾಸಕ್ಕೆ ನೆರವಾದ ಹಿತೈಷಿಗಳಿಗೆ ಸಾರ್ಥಕತೆ ನೀಡಿದೆ ಎಂದು ಹೇಳಿದರು.

ಗ್ರಾಮೀಣ ವಿದ್ಯಾರ್ಥಿಗಳು ಸೌಲಭ್ಯ ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ನಗರ ಘಟಕದ ‌ಜೆಡಿಎಸ್ ಅಧ್ಯಕ್ಷ ಶರವಣ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಮುಂದೆ ಅವರ ಮಾರ್ಗದರ್ಶನದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದ್ದಾರೆ. ಅವರ ಆದರ್ಶ ಜೀವನ ಇತರರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು. ತಾಲೂಕು ಜೆಡಿಎಸ್ ಅದ್ಯಕ್ಷ ಸುರೇಂದ್ರ ಸಂಘಟನಾ ಕಾರ್ಯದರ್ಶಿ ಸತೀಶ್ ಪಾಪಣ್ಣ ಉಪಸ್ಥಿತರಿದ್ದರು

admin
the authoradmin

Leave a Reply

Translate to any language you want