LatestMysore

ಏ.21 ಕ್ಕೆ   ಕುವೆಂಪು ಭವನ, ಮಸಣಿಕಮ್ಮ  ದೇಗುಲದ ಶಿಲಾನ್ಯಾಸ ಸೇರಿ ವಿವಿಧ ಕಾಮಗಾರಿಗೆ ಸಿಎಂ ಚಾಲನೆ

ಪಿರಿಯಾಪಟ್ಟಣ (ರವಿಚಂದ್ರ ಬೂದಿತಿಟ್ಟು): ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಕ್ತಿ ದೇವತೆ ಶ್ರೀ ಮಸಣಿಕಮ್ಮ ದೇವಾಲಯ ನಿರ್ಮಾಣ, ಕುವೆಂಪು ಭವನ ನಿರ್ಮಾಣ, ಬೆಟ್ಟದಪುರ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗಳ ರೂ. 419.78 ಕೋಟಿಗಳ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಲು ಏಪ್ರಿಲ್ 21 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಪಿರಿಯಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಪಶುಸಂಗೋಪನೆ ಮತ್ತು ರೈಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ತಿಳಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ 9.19.ಕೋಟಿ ವೆಚ್ಚದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಮಸಣಿಕಮ್ಮ ದೇವಾಲಯದ ಶಂಕುಸ್ಥಾಪನೆ .50 ಕೋಟಿ ವೆಚ್ಚದಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ರಸ್ತೆ , ಕುವೆಂಪು ಭವನಕ್ಕೆ 6 ಕೋಟಿ   ಸೇರಿದಂತೆ ಒಟ್ಟು  419.78 ಕೋಟಿ ವೆಚ್ಚದಲ್ಲಿ ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಇದರೊಂದಿಗೆ ಕೃಷಿ, ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಬಿವೃದ್ಧಿ ನಿಗಮ, ಗ್ರಾಮೀಣ ಅಭಿವೃದ್ಧಿ ಯೋಜನೆ, ನಗರ ವಸತಿ ಯೋಜನೆ , ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡದ ಜೇನುಕುರುಬ ಜನಾಂಗದ ವಸತಿ ರಹಿತ ಫಲಾನುಭವಿಗಳಿಗೆ ವಸತಿ ಯೋಜನೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಹಕಾರ ಇಲಾಖೆ ಹಾಗೂ ಇನ್ನೂ ವಿವಿಧ ಇಲಾಖೆಗಳ ನೂರಾರು ಜನ ಫಲಾನುಭವಿಗಳಿg ಸರ್ಕಾರಿ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತದೆ.

ಎಲ್ಲಾ ರಾಜ್ಯ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಒಟ್ಟು 419.78 ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಕಾರ್ಯಕ್ರಮದಲ್ಲಿ ಬಂದ ಜನರಿಗೆ ಎಲ್ಲರಿಗೂ ಊಟದ ವ್ಯವಸ್ಥೆ ಇರುತ್ತದೆ. ಆದ್ದರಿಂದ ತಾಲ್ಲೂಕಿನ ಜನತೆ ಪಕ್ಷಭೇದ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು ಮುಖಂಡರಾದ ವಲದಪ್ಪ  ಉಪಸ್ಥಿತರಿದ್ದರು.

admin
the authoradmin

Leave a Reply

Translate to any language you want