ಹೊಸೂರು(ಸಂಘಟನೆ ಮಂಜುನಾಥ್): ಎಂಸಿಡಿಸಿಸಿ ಬ್ಯಾಂಕಿನ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದೊಡ್ಡಸ್ವಾಮೇಗೌಡ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಶಂಕರ್ ಹೇಳಿದರು.
ಸಾಲಿಗ್ರಾಮ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಫೆ. 13 ರಂದು ಸಾಲಿಗ್ರಾಮ ಪಟ್ಟಣದ ಶಾದಿ ಮಹಲ್ ಭವನದಲ್ಲಿ ಮಧ್ಯಾಹ್ನ 2 ಘಂಟೆಗೆ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಎಂಸಿಡಿಸಿಸಿ ಬ್ಯಾಂಕಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದೊಡ್ಡಸ್ವಾಮೇಗೌಡ ಹಾಗೂ ಪತ್ನಿ ವನಜಾಕ್ಷಮ್ಮ, ಹಾಗೂ ಕ್ಷೇತ್ರದ ಶಾಸಕರಾದ ಡಿ.ರವಿಶಂಕರ್ ಹಾಗೂ ಪತ್ನಿ ಸುನಿತಾ ಡಿ.ರವಿಶಂಕರ್ ಅವರಿಗೆ ಅಭಿನಂದನಾ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಹೆಬ್ಬಾಗಿಲಲ್ಲಿರುವ ಶ್ರೀಯೋಗ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ನಾನಾ ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಯೊಂದಿಗೆ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು ಅವಳಿ ತಾಲೂಕಿನ ಕಾರ್ಯಕರ್ತರು ಹಾಗೂ ಮುಖಂಡರು ಸೇರಿದಂತೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಉದಯ್ ಶಂಕರ್ ತಿಳಿಸಿದ್ದಾರೆ.
ಈ ಬಾರಿ ಚುಂಚನಕಟ್ಟೆ ಶ್ರೀರಾಮ ದೇವಾಲಯದ ಹುಂಡಿಗೆ ಬಿದ್ದ ಕಾಣಿಕೆ ಹಣವೆಷ್ಟು ಗೊತ್ತಾ?








