ಮೈಸೂರು: ಜಿಲ್ಲಾಡಳಿತದ ವತಿಯಿಂದ ಏ. 23ರಂದು ನಡೆಯುವ ಶ್ರೀ ಭಗೀರಥ ಜಯಂತೋತ್ಸವ ಕಾರ್ಯಕ್ರಮದಲ್ಲಿ ಉಪ್ಪಾರ ಸಮುದಾಯದ ಸಂಘಟನೆಗಳು ಪಾಲ್ಗೊಂಡು ಅರ್ಥಪೂರ್ಣವಾಗಿ ಜಯಂತೋತ್ಸವವನ್ನು ಮಾಡುವ ಮೂಲಕ ಅತ್ಯಂತ ಯಶಸ್ವಿಯಾಗಿ ನಡೆಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳ ವಿವಿಧ ಉಪ್ಪಾರ ಸಂಘಟನೆಗಳವರು, ಸಮುದಾಯದ ಜನಪ್ರತಿನಿಧಿಗಳು, ಮುಖಂಡರುಗಳು, ಯುವಕರು, ಮಹಿಳೆಯರು ಸೇರಿದಂತೆ ಸರ್ವರೂ ಸಹಕಾರ ನೀಡಬೇಕೆಂದು ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಕರಳಾಪುರ ನಾಗರಾಜು ಮನವಿ ಮಾಡಿದರು.
ನಗರದ ಉಪ್ಪಾರ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಜಿಲ್ಲಾ ಉಪ್ಪಾರ ಸಂಘ ಮತ್ತು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶ್ರೀ ಭಗೀರಥ ಜಯಂತೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ,
ಶ್ರೀ ಭಗೀರಥ ಜಯಂತೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸರ್ವರು ಸಹಕಾರ ನೀಡಬೇಕು ಎಂದರು.
ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ ಪ್ರತಿವರ್ಷದಂತೆ ಈ ಸಾಲಿನಲ್ಲಿಯೂ ಕೂಡ ವಿಶಿಷ್ಟವಾಗಿ ಉಪ್ಪಿನ ರಾಶಿಯನ್ನು ಪೂಜೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ವಿವಿಧ ಕಲಾತಂಡಗಳೊಂದಿಗೆ ಶ್ರೀ ಭಗೀರಥ ಮಹರ್ಷಿಗಳ ಭಾವಚಿತ್ರವನ್ನು ಮೆರವಣಿಗೆ ಮಾಡಲಾಗುವುದು ಎಂದರು.

ಜಯಂತೋತ್ಸವವನ್ನು ಮಾಡುವ ಸಂಬಂಧ ವಿವಿಧ ಸಮಿತಿಗಳನ್ನು ರಚಿಸಿ ಅವುಗಳ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಲಾಗುವುದು. ಏ.7ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಆಡಳಿತದ ವತಿಯಿಂದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಸಮುದಾಯದ ಮುಖಂಡರುಗಳು, ಸಂಘಟನೆಗಳವರು ಸಭೆಯಲ್ಲಿ ಪಾಲ್ಗೊಂಡು ಸಭೆಯನ್ನು ಯಶಸ್ವಿ ಮಾಡಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಮುಖಂಡರುಗಳಾದ ಡಿ.ಜಗನ್ನಾಥ್ ಸಾಗರ್, ಎ.ಟಿ.ಸೋಮಶೇಖರಪ್ಪ, ಎಂ.ಸೋಮಣ್ಣ, ಡಾ.ಎಂ.ಗೋವಿಂದರಾಜು, ಕನಕನಗರ ಮಹದೇವ್, ಕೆ.ಟಿ.ಮೋಹನ್ ಕುಮಾರ್, ನಾಗರಾಜು, ಕೋಟೆಮಹದೇವ್, ಜವರಶೆಟ್ಟಿ, ಶಿವಣ್ಣ, ಮಹದೇವ್, ವಕೀಲ ಉಮೇಶ್, ಯೋಗೇಶ್, ಮಾದೇಶ, ಸತೀಶ್, ಮಲ್ಲೇಶ್, ವಿಜಯಕುಮಾರಿ, ಮಮತಬ್ಯಾನರ್ಜಿ, ರತ್ನಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.








