ಹುಣಸೂರು(ಹಿರಿಕ್ಯಾತನಹಳ್ಳಿ ಸ್ವಾಮಿಗೌಡ): ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾಮಕನಿಗೆ ಗ್ರಾಮಸ್ಥರು ಗೂಸಾ ನೀಡಿ ಪೊಲೀಸರಿಗೊಪ್ಪಿಸಿರುವ ಘಟನೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ.
ಬಿಳಿಕೆರೆ ಹೋಬಳಿಯ ಹೊಸರಾಮನಹಳ್ಳಿಯ ಲೋಕೇಶ್(46) ಬಂಧಿತ. ಆರೋಪಿಯಾಗಿರುವ ಲೋಕೇಶ್ ಡಿ.3ರಂದು ಒಂಬತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಸಂಬಂಧ ಬಾಲಕಿಯ ಪೋಷಕರು ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಲೋಕೇಶನ ಪತ್ತೆಗೆ ಕ್ರಮ ವಹಿಸಿದ್ದರು. ತಲೆಮರೆಸಿಕೊಂಡು ಪೊಲೀಸರಿಗೆ ಸಿಗದೆ ಬದುಕುವುದು ಕಷ್ಟವಾಗಿದ್ದರಿಂದ ಆರೋಪಿ ಲೋಕೇಶ್ ಪೊಲೀಸರಿಗೆ ಶರಣಾಗಲು ನಿರ್ಧರಿಸಿದ್ದನು ಎನ್ನಲಾಗಿದೆ.

ಅದರಂತೆ ಈತ ಬಿಳಿಕೆರೆ ಪೊಲೀಸ್ ಠಾಣೆಗೆ ಬರುತ್ತಿದ್ದ ವೇಳೆ ಗ್ರಾಮಸ್ಥರು ಕಾಮಕನನ್ನು ಪತ್ತೆ ಹಚ್ಚಿ ಗೂಸಾ ನೀಡಿ 112ಗೆ ಮಾಹಿತಿ ನೀಡಿದ ಮೇರೆಗೆ ತಕ್ಷಣವೇ ಆಗಮಿಸಿದ ಪೊಲೀಸರು ದಾಸ್ತಿಕೊಳ ಗ್ರಾಮದ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.








