ಮೈಸೂರು: ನಗರದ ಪ್ರತಿಷ್ಠಿತ ದಕ್ಷ ಕಾಲೇಜಿನಲ್ಲಿ ಏಪ್ರಿಲ್ 6 ಮತ್ತು 7 ರಂದು ‘ದಕ್ಷ ದ್ವಿತಿ’ಹೆಸರಿನಲ್ಲಿ ವಾರ್ಷಿಕ ಹಬ್ಬವನ್ನು ವೈಭವದಿಂದ ಆಚರಿಸಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಎರಡು ದಿನಗಳ ಈ ಮಹೋತ್ಸವವು ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
ಏಪ್ರಿಲ್ 6 ರಂದು ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಉದ್ಘಾಟನೆ ನಡೆಯಲಿದೆ. ಈ ಸಂದರ್ಭ ಲಯನ್ಸ್ ಬ್ಲಡ್ ಸೆಂಟರ್ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ಮೈಸೂರು ವಿಶ್ವವಿದ್ಯಾಲಯದ ಸ್ವಯಂ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕರಾದ ಡಾ. ಎಂ.ಬಿ. ಸುರೇಶ್, ಮೈಸೂರು ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತರಾದ ಶ್ರೀಮತಿ ಪ್ರತಿಭಾ ಹಾಗೂ ಲಯನ್ಸ್ ಬ್ಲಡ್ ಸೆಂಟರ್ ಜೀವದಾರ ಘಟಕದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಗಿರೀಶ್ ಭಾಗವಹಿಸಲಿದ್ದಾರೆ.
ಅದೇ ದಿನ ವ್ಯವಹಾರ ರಸಪ್ರಶ್ನೆ, “ಕೂಕಿಂಗ್ ವಿತೌಟ್ ಫೈರ್”, ನಿಧಿ ಅನ್ವೇಷಣೆ, ಫೋಟೋಗ್ರಫಿ ಹಾಗೂ ವಿಡಿಯೋ ತಯಾರಿಕಾ ಸ್ಪರ್ಧೆಗಳು ನಡೆಯಲಿದ್ದು, ಯುವಜನರ ಗಮನ ಸೆಳೆಯುವ ಆಟೋ ಎಕ್ಸ್‌ಪೋ ಮೇಳವೂ ವಿಶೇಷ ಆಕರ್ಷಣೆಯಾಗಿರಲಿದೆ.

ಏ.7 ರಂದು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ವೃತ್ತಿಪರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಇದರ ಜೊತೆಗೆ ರಾಂಪ್ ವಾಕ್, ಸಮೂಹ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮುಖ್ಯ ಅತಿಥಿಗಳಾಗಿ ಉದ್ಯೋನ್ಮುಖ ನಟ ಹಾಗೂ ಬಿಗ್ ಬಾಸ್–10 ವಿಜೇತ ಕಾರ್ತಿಕ್ ಮಹೇಶ್ ಮತ್ತು ಖ್ಯಾತ ನಿರೂಪಕಿ ಯಶಸ್ವಿನಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮೈಸೂರು ನಗರ ಹಾಗೂ ನೆರೆಯ ಜಿಲ್ಲೆಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಲೇಜು ಆಡಳಿತ ಮಂಡಳಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮ ಸಂಯೋಜಕರಾದ ಕುಮಾರಿ ವಿಂದ್ಯಾ (ಮೊಬೈಲ್: 89718 97127) ಅವರನ್ನು ಸಂಪರ್ಕಿಸಲು ಕೋರಲಾಗಿದೆ.








