ಹುಣಸೂರು(ಮನುಕುಮಾರ್/ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ತಮ್ಮದೂರದೃಷ್ಠಿ ಕಾರ್ಯಕ್ರಮಗಳಿಂದ ಸಾಮಾಜಿಕ ಅಭಿವೃದ್ಧಿಯ ಹರಿಕಾರ ಎನಿಸಿರುವ ಡಿ.ದೇವರಾಜ ಅರಸು ಅವರು ರಾಜಕೀಯವಾಗಿ ಬಹುದೊಡ್ಡ ಕ್ರಾಂತಿ ಮಾಡಿದವರು ಎಂದು ಹುಣಸೂರು ಯೋಜನಾ ಪ್ರಾಧಿಕಾರದ ಅದ್ಯಕ್ಷ ಹೆಚ್.ಪಿ.ಅಮರ್ ನಾಥ್ ಸ್ಮರಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ದೇವರಾಜ್ ಅರಸುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಅರಸು ಅವರು ಆಡಳಿತದಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದವರು. ಸಾಮಾಜಿಕ ಬದಲಾವಣೆ, ಬಡತನ ನಿರ್ಮೂಲನೆ, ಮನೆಗಳ ನಿರ್ಮಾಣದಲ್ಲಿ ಅದ್ದಿತೀಯ ಕೆಲಸ ಮಾಡಿದ್ದಾರೆ. ಹಿಂದು ವರ್ಗಗಳ ಅಭಿವೃದ್ಧಿಗೆ ಅಂದೇ ಬುನಾದಿ ಹಾಕಿದ ಕೀರ್ತಿ ಅರಸು ಅವರದು.
ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಭೂ ಸುಧಾರಣೆ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಉಳುವವನೇ ಭೂಮಿಯ ಒಡೆಯನೆಂದು ಪರಿವರ್ತಿಸಿದರು. ಇದರಿಂದ ಭೂಮಿ ಇಲ್ಲದವರಿಗೆ, ಬಡವರಿಗೆ ನ್ಯಾಯ ದೊರಕಿತು. ನಿವೇಶನ ರಹಿತರಿಗೆ ನಿವೇಶನ ಗಳು ಮಂಜೂರಾದವು ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅದ್ಯಕ್ಷ ರಾಘು, ಅಕ್ರಮ- ಸಕ್ರಮ ಸಮಿತಿ ಸದಸ್ಯ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ದರ್ಶನ್, ಎಸ್.ಟಿ, ಎಸಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ನೆರಳಕುಪ್ಪೆ ಮಹದೇವ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಮಂಜುನಾಥ್, ಮುಖಂಡರಾದ ಹರೀಶ್, ನಾಗರಾಜ್, ಪ್ರದೀಪ್ ಪಟೇಲ್, ಸೇರಿದಂತೆ ಅನೇಕರು ಕಾರ್ಯಕರ್ತರು ಭಾಗವಹಿಸಿದ್ದರು.








