LatestMysore

ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರು ಎಂದೆಂದಿಗೂ ಅಜರಾಮರ:ಶಾಸಕ ಡಿ.ರವಿಶಂಕರ್

ಕೆ.ಆರ್.ನಗರ (ಜಿಟೆಕ್ ಶಂಕರ್): ಪ್ರತಿ ದೇಶವಾಸಿಯು ನೆಮ್ಮದಿ ಮತ್ತು ಸಮಾನತೆಯ ಜೀವನ ನಡೆಸಲು ಅನುಕೂಲವಾಗುವಂತಹ ವಿಶ್ವ ಶ್ರೇಷ್ಠ ಸಂವಿಧಾನ ನೀಡಿದ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರು ಅಜರಾಮರ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪುರಸಭೆ ಮತ್ತು  ತಾಲೂಕು ಆಡಳಿತ ಮತ್ತು ದಲಿತ ಸಂಘಟನೆಗಳ ಆಶ್ರಯದಲ್ಲಿ ನಡೆದ  ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ  135ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತದ ಜನತೆಯ ಸುಭದ್ರ ಭವಿಷ್ಯಕ್ಕಾಗಿ ಹತ್ತು ಹಲವು‌ ಶಾಶ್ವತ ಕೊಡುಗೆ ಗಳನ್ನು ನೀಡಿದ ಬಾಬಾ‌ ಸಾಹೇಬರು ಸೂರ್ಯ ಮತ್ತು ಚಂದ್ರರು ಇರುವವರೆಗೂ ಶಾಶ್ವತ ಎಂದು ಬಣಿಸಿದ ಶಾಸಕರು ಸಮಾಜದ ಬಾಂದವರ ಬೇಡಿಕೆಯಂತೆ ಅಂಬೇಡ್ಕರ್ ಪುತ್ಥಳಿ ಬಳಿ ಇರುವ‌ ಅರಳಿ ಮರವನ್ನು ತೆರವು ಮಾಡಿ ಇಲ್ಲಿ ಸುಂದರ ಉದ್ಯಾನವನ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ಪಟ್ಟಣದ ಹೊರ ವಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಮುಂದುವರೆದ ಕಾಮಗಾರಿಗೆ‌ ಸರ್ಕಾರದಿಂದ ಎರಡು ಕೋಟಿ‌ಅನುದಾನ ಬಿಡುಗಡೆ ಮಾಡಿಸಿಕೊಡುವುದಾಗಿ ಸಮಾಜ ಕಲ್ಯಾಣ ಸಚಿವರು ಭರವಸೆ ನೀಡಿದ್ದಾರೆ ಎಂದರು.

ಸಾಲಿಗ್ರಾಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ನಾಗರಾಜು ಪ್ರಧಾನ ಭಾಷಣ ಮಾಡಿದರು. ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಂಕರ್‌ಮೂರ್ತಿ, ಜಿ.ಪಂ.ಮಾಜಿ ಅಧ್ಯಕ್ಷ ಬಸವರಾಜಪುರಸಿದ್ದಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಎಂ.ಹೆಚ್.ಸ್ವಾಮಿ, ಆದಿಜಾಂಬವ ಸಂಘದ ಅಧ್ಯಕ್ಷ ಎಂ.ಲೋಕೇಶ್ ಮಾತನಾಡಿದರು.

ತಂಬಾಕು ಮಂಡಳಿಯ ನಿವೃತ್ತ ಪ್ರಾದೇಶಿಕ ವ್ಯವಸ್ಥಾಪಕ ಮಂಜುರಾಜ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್,   ಪುರಸಭೆ ಮಾಜಿ ಅಧ್ಯಕ್ಷ ಕೋಳಿಪ್ರಕಾಶ್,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್,  ಎಸ್‌.ಸಿ ಘಟಕದ ಅಧ್ಯಕ್ಷ ಡಿ.ವಿ.ಗುಡಿ ನಂದೀಶ್,  ದಲಿತ‌ ಮುಖಡರಾದ  ಬಿ.ಹೆಚ್.ಕುಮಾರ್, ಎಂ.ಹೆಚ್.ರಾಜೇಶ್, ಬಸವೇಶ್, ಎಂ.ಎಸ್.ಮಲ್ಲೇಶ್, ರಾಜಯ್ಯ,   ಖಜಾಂಚಿ ಹೆಚ್.ಎಂ.ಮಂಜು, ದಸಂಸ ತಾಲೂಕು ಅಧ್ಯಕ್ಷ ಎಂ.ಎಸ್.ಮಲ್ಲೇಶ್, ತಾ.ಪಂ. ಇ.ಓ ವಿ.ಪಿ.ಕುಲದೀಪ್, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ಬಿಇಒ ಆರ್.ಕೃಷ್ಣಪ್ಪ, ಬಿಸಿಎಂ ಇಲಾಖೆಯ ಮೇಘನಾ,  ಮತ್ತಿತರರು ಹಾಜರಿದ್ದರು.

ಕೆ. ಆರ್.ನಗರ ವ್ಯಾಪ್ತಿಯ ಸುದ್ದಿಗಳಿಗಾಗಿ ಇದರ ಮೇಲೆ ಕ್ಲಿಕ್ ಮಾಡಿ…

admin
the authoradmin

Leave a Reply

Translate to any language you want