LatestNews

ಯಳಂದೂರಿನಲ್ಲಿ 72ನೇ ವನ್ಯಜೀವಿ ಸಪ್ತಾಹದ ಮ್ಯಾರಥಾನ್ ಓಟಕ್ಕೆ ಶಾಸಕ ಎ.ಆರ್ ಕೃಷ್ಣಮೂರ್ತಿ ಚಾಲನೆ

ಯಳಂದೂರು(ನಾಗರಾಜ ವೈ.ಕೆ.ಮೋಳೆ): ಕರ್ನಾಟಕ ಅರಣ್ಯ ಇಲಾಖೆ, ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ, ಚಾಮರಾಜನಗರ, ಯಳಂದೂರು ಮತ್ತು ಕೊಳ್ಳೇಗಾಲ ವನ್ಯಜೀವಿ ವಲಯಗಳ ಸಂಯುಕ್ತಾಶ್ರಯದಲ್ಲಿ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಆಯೋಜಿಸಿದ್ದ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಲಾಯಿತು.

ಗಾಂಧಿ ಜಯಂತಿ ಪ್ರಯುಕ್ತ ಯಳಂದೂರಿನ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್ ಕೃಷ್ಣಮೂರ್ತಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು.

ಈ ವರ್ಷದ ವನ್ಯಜೀವಿ ಸಪ್ತಾಹದ ಧ್ಯೇಯ “ಆವಾಸ ಸ್ಥಳಗಳ ಸಂಪರ್ಕ – ವನ್ಯಜೀವಿಗಳ ಸಮೃದ್ಧಿ” ಎಂಬ ಘೋಷವಾಕ್ಯದಡಿ ಈ ಓಟ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎ.ಆರ್ ಕೃಷ್ಣಮೂರ್ತಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಮಾಲತಿಪ್ರಿಯಾ ಎಂ, ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಬಿ.ಎಸ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷರು ಹೊಂಗನೂರು ಚಂದ್ರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಯರಿಯೂರು ಯೋಗೇಶ್, ಮುಖಂಡರು ಜೆ. ಶ್ರೀನಿವಾಸ್, ಮಲ್ಲು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹಾಲಕ್ಷ್ಮಿ ಎಂ , ವನ್ಯಜೀವಿ ವಲಯದ ಉಪ ವಲಯ ಅರಣ್ಯಾಧಿಕಾರಿ ಮಧು ಡಿ.ಕೆ, ಅನಂತರಾಮು. ಬಿ ಸೇರಿದಂತೆ  ಉಪವಲಯ ಅರಣ್ಯ ಅಧಿಕಾರಿ ಲಕ್ಷ್ಮಣ ಎಂ.ಬಾಡಗಿ ರಘುರಾಮ್ ಮಹೇಶ್, ಬೀಟ್ ಫಾರೆಸ್ಟ್ ಮಲ್ಲಪ್ಪ, ಚಂದ್ರಶೇಖರ್, ಪ್ರಭುಸ್ವಾಮಿ, ಬಸವಣ್ಣ, ನಾಯಕ, ಸಿಬ್ಬಂದಿ ಸ್ಥಳೀಯ ಮುಖಂಡರು, ಯುವಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮ್ಯಾರಥಾನ್ ನಲ್ಲಿ ಭಾಗವಹಿಸಿ ವನ್ಯಜೀವಿ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

admin
the authoradmin

Leave a Reply