ಕುಶಾಲನಗರದಲ್ಲಿ ಅಧಿಕಾರ ಸ್ವೀಕಾರ ಮಾಡಿದ ನೂತನ ತಹಸೀಲ್ದಾರ್ ರಮೇಶ್ ಬಾಬು
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ

ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ವಹಿಸಿಕೊಂಡಿರುವ ರಮೇಶ್ ಬಾಬು ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾ ಹಾಗೂ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕುಶಾಲನಗರ ತಾಲ್ಲೂಕು ಕಂದಾಯ ಇಲಾಖೆಯ ಕಚೇರಿಯಲ್ಲಿ ನಡೆದ ಸರಳ ಹಾಗೂ ಅರ್ಥಪೂರ್ಣ ಸಮಾರಂಭದಲ್ಲಿ ಸಂಘಟನೆಯ ಪದಾಧಿಕಾರಿಗಳು ನೂತನ ತಹಶೀಲ್ದಾರರಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ ಆತ್ಮೀಯವಾಗಿ ಅಭಿನಂದಿಸಿದರು. ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳ ಪ್ರೀತಿಯ ಸ್ವಾಗತಕ್ಕೆ ಹರ್ಷ ವ್ಯಕ್ತಪಡಿಸಿದ ನೂತನ ತಹಶೀಲ್ದಾರ್ ರಮೇಶ್ ಬಾಬು ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕುಶಾಲನಗರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಜನಪರವಾಗಿ ಕಾರ್ಯನಿರ್ವಹಿಸುವುದು ನನ್ನ ಮುಖ್ಯ ಗುರಿಯಾಗಿದೆ. ಕಂದಾಯ ಇಲಾಖೆಯ ಎಲ್ಲಾ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲು ಹಾಗೂ ತಾಲ್ಲೂಕಿನ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಎಲ್ಲರ ಸಹಕಾರದೊಂದಿಗೆ ಉತ್ತಮ ಆಡಳಿತ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ತಿಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಮತ್ತು ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ್ ಗೌಡ ಮತ್ತು ಕರವೇ ಸ್ವಾಭಿಮಾನಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಣಿಕಂಠ.

ಜಿಲ್ಲಾ ಖಜಾಂಜಿ ಅಂತೋನಿ, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಕೆ.ಎಸ್. ಶಿವ, ತಾಲ್ಲೂಕು ಉಪಾಧ್ಯಕ್ಷರಾದ ನಾಸಿರ್, ತಾಲ್ಲೂಕು ಸಂಘಟನಾಕಾರರಾದ ವಿ.ಪಿ. ಚಂದ್ರು, ತಾಲ್ಲೂಕು ಮಹಿಳಾ ಘಟಕದ ಉಪಾಧ್ಯಕ್ಷರಾದ ದಿವ್ಯ ಡಿಸೋಜ, ತಾಲ್ಲೂಕು ಗೌರವಾಧ್ಯಕ್ಷರಾದ ನಾಗರತ್ನ, ಕುಶಾಲನಗರ ನಗರ ಘಟಕದ ಗೌರವಾಧ್ಯಕ್ಷರಾದ ವಿಲ್ಸನ್, ಆರ್ಮಿ ದಿನೇಶ್, ರಫೀಕ್, ಜೈರುದ್ದೀನ್, ಅನಿಫ್, ಪ್ರಶಾಂತ್ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು







