Latest

ಜ.19 ರಿಂದ 30ರವರೆಗೆ ಕೆ.ಆರ್.ನಗರದ ಅರ್ಕೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ… ಸಕಲ ಸಿದ್ಧತೆಗೆ ಕ್ರಮ

ಕೆ.ಆರ್.ನಗರ(ಜಿಟೆಕ್ ಶಂಕರ್): ಪಟ್ಟಣದ ಹೊರ ವಲಯದಲ್ಲಿರುವ ಮೀನಾಕ್ಷಿ‌ಸಮೇತ ಅರ್ಕೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಜ.25ನೇ ಭಾನುವಾರ ರಥಸಪ್ತಮಿ ದಿನದಂದು ನಡೆಯಲಿದ್ದು ಅದಕ್ಕಾಗಿ ತಾಲೂಕು ಆಡಳಿತದವರು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದ್ದಾರೆ.

ದೇವಾಲಯದ ಆವರಣದಲ್ಲಿ ಶುಕ್ರವಾರ ನಡೆದ ಅರ್ಕೇಶ್ವರ ಸ್ವಾಮಿ ಜಾತ್ರೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಗ್ಗೆ 11.10ರಿಂದ 12 ಗಂಟೆಯೊಳಗೆ ಬ್ರಹ್ಮ ರಥೋತ್ಸವ ನಡೆಯಲಿದೆ ಎಂದು ತಿಳಿಸಿದರಲ್ಲದೆ,      ದೇವಾಲಯ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿದ್ದ ಹಿನ್ನಲೆಯಲ್ಲಿ  ಕಳೆದ ವರ್ಷ ಜಾತ್ರೆ ಮತ್ತು ಬ್ರಹ್ಮ ರಥೋತ್ಸವ ನಡೆದಿರಲಿಲ್ಲ ಹಾಗಾಗಿ ಈ ವರ್ಷ ಎಲ್ಲರೂ ಸೇರಿ ಅತ್ಯಂತ ಅದ್ದೂರಿ ಮತ್ತು ವಿಜೃಂಭಣೆಯಿಂದ ಜಾತ್ರೆ ನಡೆಸಲು ಕೈಜೋಡಿಸಿ ಎಂದು ಮನವಿ ಮಾಡಿದರು.

ಬ್ರಹ್ಮ ರಥೋತ್ಸವದ ಅಂಗವಾಗಿ ಜ.19 ರಿಂದ 30ರ ವರೆಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೇರವೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದ ಶಾಸಕರು ಜಾತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸುವುದರ ಜತೆಗೆ ಪಟ್ಟಣದ ತೋಪನಮ್ಮ ದೇವಾಲಯದಿಂದ ಹಳೇ ಎಡತೋರೆ ಅರ್ಕೇಶ್ವರ ದೇವಾಲಯದವರೆಗೆ ದೀಪಾಲಂಕಾರ ಅಳವಡಿಸುವುದಾಗಿ ಸೆಸ್ಕಾಂ ಇಲಾಖೆಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ, ಇಒ ವಿ.ಪಿ.ಕುಲದೀಪ್, ಪುರಸಭೆ ಮಾಜಿ ಸದಸ್ಯರಾದ ಕೋಳಿಪ್ರಕಾಶ್, ಕೆ.ವಿನಯ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ವೈ.ಎಸ್.ಕುಮಾರ್, ಬಿಇಒ ಆರ್.ಕೃಷ್ಣಪ್ಪ, ಸಿಡಿಪಿಒ ಸಿ.ಎಂ.ಅಣ್ಣಯ್ಯ, ಸೆಸ್ಕಂ ಎಇಇ ಅರ್ಕೇಶ್ ಮೂರ್ತಿ, ಇಂಜಿನಿಯರ್ ಪ್ರಸನ್ನ,  ಪುರಸಭೆ ಮುಖ್ಯಾಧಿಕಾರಿ ರಮೇಶ್,  ವಲಯ ಅರಣ್ಯಾಧಿಕಾರಿ ಹರಿಪ್ರಸಾದ್, ರೇಷ್ಮೆ ಇಲಾಖೆಯ ಸಹಕಾರ ನಿರ್ದೇಶಕ ಶಿವಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

admin
the authoradmin

Leave a Reply

Translate to any language you want