Latest

ಹಿರೀಕ್ಯಾತನಹಳ್ಳಿಯ ಮಹದೇಶ್ವರ ದೇವಸ್ಥಾನದ ಉದ್ಘಾಟನೆಗೆ ಹೆಚ್.ಡಿ.ಕುಮಾರಸ್ವಾಮಿಗೆ ಗ್ರಾಮಸ್ಥರ ಆಹ್ವಾನ

ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ):  ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಹದೇಶ್ವರ ದೇವಸ್ಥಾನ ಉದ್ಘಾಟನೆಗೆ ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಯವರನ್ನು ಭೇಟಿ ಮಾಡಿ ಉದ್ಘಾಟನೆಗೆ ಗ್ರಾಮಸ್ಥರು ಆಹ್ವಾನ ನೀಡಿದರು.

ಹುಣಸೂರು ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ಫೆ.6 ರಂದು ಮಹದೇಶ್ವರ ದೇವಸ್ಥಾನ ಉದ್ಘಾಟನೆ ನಡೆಯಲಿದೆ. ಹೀಗಾಗಿ ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಹಾಗೂ ಗ್ರಾಮದ ಯಜಮಾನರಾದ ಜಗದೀಶ್, ಪಾಪಣ್ಣ, ಸೇರಿದಂತೆ ಗ್ರಾಮದ ಮುಖಂಡರು ಬೆಂಗಳೂರಿನ ಬಿಡದಿ ತೋಟದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಗ್ರಾಮಸ್ಥರಿಂದ ಗೌರವ ಸಮರ್ಪಣೆ ಮಾಡಿ ಆಹ್ವಾನ ಪತ್ರಿಕೆ ನೀಡಿ ಆಮಂತ್ರಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯವರನ್ನು ಕೂಡ ಗೌರವಿಸಿ ಅವನ ಪತ್ರಿಕೆ ನೀಡಿ ಆಮಂತ್ರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳಾದ   ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸ್ವಾಮಿಗೌಡ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಉದಯ್ ಕುಮಾರ್, ಪುಟ್ಟರಾಜು,ಹರವೆ ಶ್ರೀಧರ್,ಮಹದೇವ್, ಸುರೇಶ್,ನಿಂಗರಾಜು, ಸಣ್ಣ ನಾಯಕ, ರವಿ ನಾಯಕ, ವೀರಶೈವ ಮುಖಂಡ ಶಿವಣ್ಣ,, ಪ್ರಜ್ವಲ್, ಜಗದೀಶ್, ಗೌರಾಜ ಶೆಟ್ಟಿ ಸೇರಿದಂತೆ ಹಲವು  ಗ್ರಾಮದ ಮುಖಂಡರು ಹಾಜರಿದ್ದರು.

admin
the authoradmin

Leave a Reply

Translate to any language you want