CrimeLatest

ಸರಗೂರು ಬಳಿ ಬಾಲಕಿ ಮೇಲೆ ದೌರ್ಜನ್ಯ ಎಸಗಿದ 48 ವರ್ಷದ ವ್ಯಕ್ತಿ ಅರೆಸ್ಟ್…  

ಸರಗೂರು: ಕಾಮಾಂಧ  ವ್ಯಕ್ತಿಯೊಬ್ಬ ನಾಲ್ಕು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಸರಗೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ತಾಲ್ಲೂಕಿನ ಕಾಡಬೇಗೂರು ಕಾಲೋನಿ ನಿವಾಸಿ ಪಾಪನಾಯಕ್ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಕಾಮಾಂಧನು ತನ್ನ ಮನೆಯಲ್ಲಿಯೇ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಬಾಲಕಿಯ ಕುಟುಂಬದವರು ಸರಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಸರಗೂರು ಪೊಲೀಸರು ಪ್ರಕರಣದ ಕುರಿತು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಬಾಲಕಿಯ ಗೌಪ್ಯತೆ ಹಾಗೂ ಗುರುತನ್ನು ಕಾನೂನುಬದ್ಧವಾಗಿ ರಕ್ಷಿಸಲಾಗಿದೆ.

ಇಂತಹ ಪ್ರಕರಣಗಳು ಆಗಾಗ್ಗೆ ನಡೆಯುತ್ತಿರುವುದು ನಿಜಕ್ಕೂ ನಾಗರೀಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗುವಂತಾಗಲಿ..

admin
the authoradmin

Leave a Reply