ಮೈಸೂರು: ಮೈಸೂರಿನ ಹೆಸರಾಂತ ಶಿಕ್ಷಣ ಸಂಸ್ಥೆಯಾದ ಬಿಎಸ್ ಎಸ್ ವಿದ್ಯೋದಯ ಶಾಲೆಯಲ್ಲಿ ದೇಶದ ಹೆಮ್ಮೆಯ ಪ್ರತೀಕವಾದ ಕಾರ್ಗಿಲ್ ವಿಜಯ ದಿವಸವನ್ನು ಅತ್ಯಂತ ಸಡಗರ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು.
1999ರ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ತ್ಯಾಗ-ಬಲಿದಾನಗಳನ್ನು ಸ್ಮರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸಿಆರ್ಪಿಎಫ್ (CRPF) ಅಧಿಕಾರಿ ಟಿ.ಎಸ್. ಪ್ರಸನ್ನ ಕುಮಾರ್ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಯೋಧರ ಸಾಹಸಗಾಥೆ ಹಾಗೂ ದೇಶಪ್ರೇಮದ ಕುರಿತು ಸ್ಪೂರ್ತಿದಾಯಕ ನುಡಿಗಳನ್ನು ಹಂಚಿಕೊಂಡರು. ಶಾಲೆಯ ಆಡಳಿತ ಮಂಡಳಿಯವರು ಹಾಗೂ ಪ್ರಾಂಶಪಾಲರು ಕಾರ್ಯಕ್ರಮದ ನೇತೃತ್ವ ವಹಿಸಿ, ವಿದ್ಯಾರ್ಥಿಗಳಿಗೆ ದೇಶಸೇವೆಯ ಮಹತ್ವವನ್ನು ತಿಳಿಸಿಕೊಟ್ಟರು.
ಈ ವಿಶೇಷ ದಿನದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಆಕರ್ಷಕ ಮೈಮ್ (ಪ್ರತಿಮೆ ನಟನೆ) ಮತ್ತು ದೇಶಭಕ್ತಿ ಗೀತೆಗಳ ಗಾಯನ (ಗ್ರೂಪ್ ಸಾಂಗ್) ಎಲ್ಲರ ಮನಸೂರೆಗೊಂಡಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಯೋಧರ ವೀರಾವೇಶವನ್ನು ಕಣ್ಣಿಗೆ ಕಟ್ಟುವಂತೆ ಪ್ರದರ್ಶಿಸಿದ ವಿದ್ಯಾರ್ಥಿಗಳು, ನೆರೆದಿದ್ದ ಎಲ್ಲರಲ್ಲೂ ರೋಮಾಂಚನ ಮೂಡಿಸಿದರು.

ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಕಾರ್ಗಿಲ್ ಯುದ್ಧದ ಇತಿಹಾಸ ಮತ್ತು ಯೋಧರ ಶೌರ್ಯದ ಕುರಿತು ಅಮೂಲ್ಯವಾದ ಮಾಹಿತಿ ಲಭಿಸಿದ್ದು, ವಿಶೇಷವಾಗಿತ್ತು.









Hmm is anyone else encountering problems with the pictures on this blog loading? I’m trying to figure out if its a problem on my end or if it’s the blog. Any feed-back would be greatly appreciated.