ಸರ್ಕಾರ, ಪಕ್ಷ ಮತ್ತು ಸಹಕಾರಿಗಳು ವಹಿಸಿದ ಜವಬ್ದಾರಿ ಸಮರ್ಥವಾಗಿ ನಿಭಾಯಿಸುವೆ… ದೊಡ್ಡಸ್ವಾಮೇಗೌಡ

ಕೆ.ಆರ್.ನಗರ(ಜಿಟೆಕ್ ಶಂಕರ್) : ಸರ್ಕಾರ, ಪಕ್ಷ ಮತ್ತು ಸಹಕಾರಿಗಳು ನನಗೆ ವಹಿಸಿರುವ ಗುರುತರ ಜವಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ ಭರವಸೆ ವ್ಯಕ್ತಪಡಿಸಿದರು.
ಪಟ್ಟಣದ ಪಿಎಲ್ ಡಿ ಬ್ಯಾಂಕ್ ಸಮುದಾಯ ಭವನದಲ್ಲಿ ಮಂಗಳವಾರ ಸಾಲಿಗ್ರಾಮ ಮತ್ತು ಕೆ.ಆರ್.ನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ನೌಕರರ ಒಕ್ಕೂಟ, ಹಾಲು ಉತ್ಪಾದಕರ ಸಹಕಾರ ಸಂಘ, ಪಿಎಲ್ ಡಿ ಬ್ಯಾಂಕ್ ಹಾಗೂ ಟಿಎಪಿಸಿಎಂ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಪಕ್ಷದ ಹೈಕಮಾಂಡ್ ಆದೇಶದಂತೆ ಚುನಾವಣೆಗೆ ಸ್ಪರ್ದಿಸುವಂತೆ ಆದೇಶ ಬಂದ ಹಿನ್ನೆಲೆಯಲ್ಲಿ ಸಹಕಾರ ಕ್ಷೇತ್ರಕ್ಕೆ ಬಂದಿದ್ದು ಇದಕ್ಕೆ ಕಾರಣರಾದವರಿಗೆ ಅಭಾರಿಯಾಗಿದ್ದೇನೆ. ಸಹಕಾರ ಕ್ಷೇತ್ರದಲ್ಲಿ ಇತ್ತೀಚೆಗೆ ರಾಜಕೀಯದ ಸೋಂಕು ಹರಡುತ್ತಿದ್ದು ಇಂದು ನಡೆಸುತ್ತಿರುವ ಅಭಿನಂದನಾ ಸಮಾರಂಭಕ್ಕೆ ಕೆಲ ಆಹ್ವಾನಿತರು ಬಾರದಿರುವುದು ಅದಕ್ಕೆ ಉದಾಹರಣೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬ್ಯಾಂಕಿನಿಂದ ದೊರೆಯುವ ಎಲ್ಲಾ ಸವಲತ್ತುಗಳನ್ನು ಅರ್ಹ ರೈತರ ಮನೆ ಬಾಗಿಲಿಗೆ ತಲುಪಿಸುವ ಭರವಸೆ ನೀಡಿದ ಅಧ್ಯಕ್ಷರು ಹಾಲು ಉತ್ಪಾದಕ ಸಹಕಾರ ಸಂಘಗಳವರು ಮುಂದೆ ಎಂಡಿಸಿಸಿ ಬ್ಯಾಂಕಿನಲ್ಲಿಯೆ ವ್ಯವಹರಿಸಿ ಎಂದು ಸಲಹೆ ನೀಡಿದರು. ಕೃಷಿ ಪತ್ತಿನ ಸಹಕಾರ ಸಂಘಗಳ ಜತೆಗೆ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ಮಹಾ ಮಂಡಳದ ಅಡಿಯಲ್ಲಿ ಬರುವ ಸಂಘಗಳಿಗೂ ಮುಂದಿನ ದಿನಗಳಲ್ಲಿ ಸಾಲ ನೀಡಲು ಕ್ರಮ ಕೈಗೊಳ್ಳಲಾಗುತ್ತದೆಂದು ಪ್ರಕಟಿಸಿದರು.
ಶಾಸಕ ಡಿ.ರವಿಶಂಕರ್, ಮುಡಾ ಮಾಜಿ ಅಧ್ಯಕ್ಷ ಹೆಚ್.ಎನ್.ವಿಜಯ್, ಎಂಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಯರಾಮ್, ತಾ.ಪಂ.ಮಾಜಿ ಅಧ್ಯಕ್ಷ ಹಾಡ್ಯಮಹದೇವಸ್ವಾಮಿ, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಹಾ ಮಂಡಳ ಅಧ್ಯಕ್ಷ ಎಂ.ರಮೇಶ್, ಮೈಮುಲ್ ನಿರ್ದೇಶಕಿ ಮಲ್ಲಿಕಾರವಿಕುಮಾರ್, ರಾಜ್ಯ ಕುಕ್ಕೂಟ ಅಭಿವೃದ್ಧಿ ಮಹಾ ಮಂಡಳ ನಿರ್ದೇಶಕ ಎಸ್.ಸಿದ್ದೇಗೌಡ ಮಾತನಾಡಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ಹಂಪಾಪುರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಪಿ.ಪ್ರಶಾಂತ್, ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಸಿ.ಪ್ರಸಾದ್, ನಿರ್ದೇಶಕರಾದ ರಾಹುಲ್, ಚಂದ್ರಹಾಸ, ಚಂದ್ರೇಗೌಡ, ಹೆಚ್.ಕೆ.ಪ್ರದೀಪ್, ಜಿ.ಪಂ.ಮಾಜಿ ಸದಸ್ಯ ಮಾರ್ಚಳ್ಳಿಶಿವರಾಮು, ಎಪಿಎಂಸಿ ಮಾಜಿ ಉಪಾಧ್ಯಕ್ಷ ಹೆಚ್.ಹೆಚ್.ನಾಗೇಂದ್ರ, ಪುರಸಭೆ ಮಾಜಿ ಅಧ್ಯಕ್ಷ ಕೋಳಿಪ್ರಕಾಶ್, ಮಾಜಿ ಸದಸ್ಯ ನಟರಾಜು, ಸಹಕಾರ ಇಲಾಖೆಯ ಎಸ್.ರವಿ, ಎಂಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ದಿನೇಶ್, ಉಮೇಶ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸೈಯದ್ ಜಾಬೀರ್, ಸೇರಿದಂತೆ ತಾಲೂಕಿನ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳು, ನಿರ್ದೇಶಕರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.
ರಾಜಕಾರಣದ ಸೋಂಕು ತಾಗದಂತೆ ಸಹಕಾರಿಗಳು ಕೆಲಸ ಮಾಡಬೇಕು
ಕೆ.ಆರ್.ನಗರ: ಸಹಕಾರ ಕ್ಷೇತ್ರಕ್ಕೆ ಜಾತಿ ಮತ್ತು ರಾಜಕಾರಣದ ಸೋಂಕು ತಾಗದಂತೆ ಪ್ರತಿಯೊಬ್ಬ ಸಹಕಾರಿಗಳು ಕೆಲಸ ನಿರ್ವಹಿಸಿ ಸರ್ಕಾರದ ಸವಲತ್ತುಗಳನ್ನು ಅರ್ಹರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಮುಡಾ ಮಾಜಿ ಅಧ್ಯಕ್ಷ ಹೆಚ್.ಎನ್.ವಿಜಯ್ ಹೇಳಿದರು.
ಪಟ್ಟಣದ ಪಿಎಲ್ ಡಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆದ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ನಿಕಟವರ್ತಿಗಳಾಗಿರುವುದರಿಂದ ಹೆಚ್ಚು ಅನುದಾನ ತಂದು ಕೆಲಸ ಮಾಡಲಿ ಎಂದರು.
ತಮಗೆ ದೊರೆತಿರುವ ಅಧಿಕಾರದ ಅನುಕೂಲ ಪಡೆದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕುಗಳ ಸಮಗ್ರ ಅಭಿವೃದ್ದಿಗೆ ಉತ್ತಮ ಕಾರ್ಯ ಯೋಜನೆ ರೂಪಿಸಬೇಕೆಂದರು. ಇಂತಹ ಉನ್ನತ ಮತ್ತು ಮಹತ್ವದ ಸ್ಥಾನಮಾನ ಹಿರಿಯ ಸಹಕಾರಿ ದುರೀಣರಾದ ದೊಡ್ಡಸ್ವಾಮೇಗೌಡರಿಗೆ ದೊರೆತಿರುವುದು ಕ್ಷೇತ್ರದ ಜನತೆ ಹೆಮ್ಮೆ ಪಡುವ ವಿಚಾರ ಎಂದು ಸಂತಸ ವ್ಯಕ್ತಪಡಿಸಿದರು.
ಶಾಸಕ ಡಿ.ರವಿಶಂಕರ್ ಮತ್ತು ನನ್ನ ನಡುವೆ ಕಳೆದ 21 ವರ್ಷಗಳಿಂದ ಅವಿನಾಭಾವ ಸಂಬಂಧವಿದ್ದು ಪಕ್ಷ ಮತ್ತು ರಾಜಕಾರಣವನ್ನು ಹೊರತು ಪಡಿಸಿ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಾನು ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡಲು ಸಿದ್ದ ನಿದ್ದು ಜನರ ಹಿತವೇ ನನಗೆ ಮುಖ್ಯ ಎಂದು ತನ್ನ ಮನದಂಗಿತ ವ್ಯಕ್ತಪಡಿಸಿದರು.

ಸನ್ಮಾನ ಅಧಿಕಾರ ಪಡೆಯುವ ವ್ಯಕ್ತಿಗೆ ಹೊರಿಸುವ ದೊಡ್ಡ ಜವಾಬ್ದಾರಿ
ಕೆ.ಆರ್.ನಗರ: ಸನ್ಮಾನ ಎಂಬುದು ಅಧಿಕಾರ ಪಡೆಯುವ ವ್ಯಕ್ತಿಗೆ ದೊಡ್ಡ ಜವಾಬ್ದಾರಿಯನ್ನು ಹೊರಿಸಲಿದ್ದು ಅದನ್ನು ನಿರ್ವಹಣೆ ಮಾಡುವ ಶಕ್ತಿ ದೊಡ್ಡಸ್ವಾಮೇಗೌಡರಿಗೆ ಇದೆ ಎಂದು ಶಾಸಕ ಡಿ.ರವಿಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಪಿಎಲ್ ಡಿ ಬ್ಯಾಂಕ್ ಸಮುದಾಯ ಭವನದಲ್ಲಿ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸಹಕಾರ ಸಂಘಗಳ ಏಳಿಗೆಗೆ ಹೊಸ ಕಾರ್ಯಕ್ರಮ ಹಮ್ಮಿಕೊಂಡು ರೈತರ ಹಿತಕ್ಕೆ ಕೆಲಸವನ್ನು ಮಾಡುವ ಶಕ್ತಿ ಇರುವುದರಿಂದ ಭವಿಷ್ಯದಲ್ಲಿ ಸರ್ವರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.
ಹಿರಿಯ ರಾಜಕೀಯ ನಾಯಕರು ಆಗಿರುವ ದೊಡ್ಡಸ್ವಾಮೇಗೌಡರಿಗೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ದೊರೆಯಲು ಪ್ರಮುಖ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರಸಿದ್ದರಾಮಯ್ಯ, ಎರಡು ಜಿಲ್ಲೆಗಳ ಶಾಸಕರು, ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕರುಗಳು ಹಾಗೂ ಸಹಕಾರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.







