ಚಾಮರಾಜನಗರ: ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ 29 ದಿನಗಳ ಅಂತರದಲ್ಲಿ ಭಕ್ತರಿಂದ 2,48,02,179 ರೂ ಕಾಣಿಕೆ ಸಂಗ್ರಹವಾಗಿದೆ.
ಚಾಮರಾಜನಗರ ಜಿಲ್ಲೆಯ ಮಗಹದೇಶ್ವರ ಬೆಟ್ಟದಲ್ಲಿ ಗುರುವಾರ ಬೆಳಗ್ಗೆಯಿಂದ ನಡೆದ ಹುಂಡಿಯಲ್ಲಿ ಸಂಗ್ರಹವಾಗಿರುವ ಕಾಣಿಕೆಗಳ ಏಣಿಕೆ ಕಾರ್ಯವು ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾಲೂರು ಮಠಾಧಿಪತಿ ಶಾಂತಮಲ್ಲಿಕಾರ್ಜುನಸ್ವಾಮಿಗಳು ದಿವ್ಯಸಾನಿದ್ಯದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ .ರಘು ನೇತೃತ್ವದಲ್ಲಿ ಹುಂಡಿ ಎಣಿಕೆ ನಡೆದು 2,48,02,179.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 35 ಗ್ರಾಂ, ಬೆಳ್ಳಿ 01 ಕೆ.ಜಿ 062 ಗ್ರಾಂ ಹುಂಡಿಯಲ್ಲಿ ಸಂಗ್ರವಾಗಿದೆ. ಇದರ ಜೊತೆಗೆ ಎರಡು ಸಾವಿರ ಮುಖಬೆಲೆಯ ಎರಡು ನೋಟುಗಳು ಮತ್ತು 6 ವಿದೇಶಿ ನೋಟುಗಳು ಸಂಗ್ರಹವಾಗಿದೆ.

ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಭಾಗ್ಯಮ್ಮ, ಮರಿಸ್ವಾಮಿ, ಮಹದೇವಪ್ಪ, ಗಂಗನ ತಿಮ್ಮಯ್ಯ, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ಮಹದೇವು, ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆಕ್ಕಧೀಕ್ಷಕ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಸಿಬ್ಬಂದಿ ಮಹೇಶ್ ಚಂದ್ರ, ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿ ಭಾಗವಹಿಸಿದ್ದರು.








