LatestMysore

ಸ್ಚಚ್ಛತೆಯೊಂದಿಗೆ ಆರೋಗ್ಯ ಕಾಪಾಡಿಕೊಳ್ಳಿ.. ಕಟ್ಟೆಮಳಲವಾಡಿಯಲ್ಲಿ  ಸ್ವಚ್ಛತಾ ಅಭಿಯಾನ

ಹುಣಸೂರು(ಹಿರಿಕ್ಯಾತನಹಳ್ಳಿ ಸ್ವಾಮಿಗೌಡ): ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾರ್ವಜನಿಕರು ಆರೋಗ್ಯ ಮತ್ತು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯ ಅಧೀಕ್ಷಕ ಪ್ರಭಾಕರ್ ಸಾರ್ವಜನಿಕರಿಗೆ ಕರೆ ನೀಡಿದರು.

ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಕಟ್ಟೆಮಳಲವಾಡಿ ಗ್ರಾಮದಲ್ಲಿ ಮೈಸೂರು ಪ್ರಾದೇಶಿಕ ವ್ಯವಸ್ಥಾಪಕರ ಕಚೇರಿಯ ಸುತ್ತೋಲೆ ಹಿನ್ನೆಲೆಯಲ್ಲಿ ಕಟ್ಟೆಮಳಲವಾಡಿ ಗ್ರಾಮದ ಆರೋಗ್ಯ ಕೇಂದ್ರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.

ಆರೋಗ್ಯಕರ ಸ್ವಚ್ಛ ಪರಿಸರವನ್ನು ನಿರ್ಮಿಸುವ ಉದ್ದೇಶವಾಗಬೇಕು ಆರೋಗ್ಯದ ದೃಷ್ಟಿಯಿಂದ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತ ಹಾಗೂ ಸಂಘ ಸಂಸ್ಥೆಗಳು ಗ್ರಾಮದ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಿ ಆರೋಗ್ಯದ ಕ್ಷೇತ್ರಕ್ಕೆ  ಹೆಚ್ಚಿನ ಬಲ ನೀಡಬೇಕು ಎಂದರು.

ಶಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಅರುಣ್ ಕುಮಾರ್, ತಂಬಾಕು ಮಂಡಳಿಯ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು

admin
the authoradmin

Leave a Reply