LatestMysore

ಸಮಾಜದಲ್ಲಿ ಉನ್ನತಸ್ಥಾನಕ್ಕೇರಲು ಶಿಕ್ಷಕರ ಪಾತ್ರ ಮುಖ್ಯ: ಶಾಸಕ ಡಿ.ರವಿಶಂಕರ್

ಕೆ.ಆರ್‌.ನಗರ(ಜಿಟೆಕ್ ಶಂಕರ್): ಸಮಾಜದಲ್ಲಿ ಯಾರೊಬ್ಬ ವ್ಯಕ್ತಿಯು ಉನ್ನತ ಸ್ಥಾನಕ್ಕೇರಲು ಶಿಕ್ಷರ ಪಾತ್ರ ಬಹಳ ಮುಖ್ಯ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಪುರಸಭೆಯ ಬಯಲು ರಂಗ ಮಂದಿರದಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಪುರಸಭೆ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನಡೆದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಜ್ಞಾನದ ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ತೋರುತ್ತಾ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಸದಾ ಬೆಂಗಾವಲಾಗಿ ನಿಲ್ಲುವವರು ಶಿಕ್ಷಕರು ಎಂದರು.

ಶಿಕ್ಷಕ ಎಂಬ ಹೆಸರೇ ಗೌರವ ನೀಡುವಂತದ್ದೂ ಆದ್ದರಿಂದ ಪ್ರತಿಯೊಬ್ಬ ಶಿಕ್ಷಕರು ಕೂಡ ತಮ್ಮ ವೃತ್ತಿಯನ್ನು ಜವಾಬ್ದಾರಿಯಿಂದ ನಿಭಾಗಿಯಿಸಿ ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ಜೀವನದ ಅರ್ಧ ಭಾಗವನ್ನು ಶಿಕ್ಷಕರ ಬಳಿಯೇ ಕಳೆಯುವುದರಿಂದ ಪ್ರತಿ ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಉತ್ತಮ ಶಿಕ್ಷಣ ನೀಡಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತಗೊಂಡ ಶಿಕ್ಷಕರಿಗೆ, ಎಸ್ ಎಸ್ ಎಲ್ ಸಿ ಯಲ್ಲಿ ನೂರರಷ್ಟು ಫಲಿತಾಂಶ ನೀಡಿದ ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ, ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಶಿಕ್ಷಕರುಗಳಿಗೆ, ಕಾಮನ್ವೆಲ್ತ್ ಕಂಚಿನ ಪದಕ ವಿಜೇತೆ ಕೆಎಸ್ ಶಿಲ್ಪಾಗೆ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ವಿಜೇತೆ ನವ್ಯಾ ಅವರನ್ನು ಸನ್ಮಾನಿಸಲಾಯಿತು,

ಇದಕ್ಕೂ ಮೊದಲು ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಕೃಷ್ಣಪ್ಪ ಅವರ ನೇತೃತ್ವದಲ್ಲಿ ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ ಎಲ್ಲಾ ಶಿಕ್ಷಕ ವೃಂದದವರು ಸರ್ಕಾರಿ ಕೃಷ್ಣರಾಜೇಂದ್ರ ಪದವಿಪೂರ್ವ ಕಾಲೇಜಿನ ಆವರಣದಿಂದ ಅಲಕೃತಗೊಂಡ ಬೆಳ್ಳಿ ರಥದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣ ರವರ ಭಾವಚಿತ್ರವನ್ನು  ಮಂಗಳವಾದ್ಯ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಕೃಷ್ಣಪ್ಪ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸಿ ಎನ್  ಸ್ವಾಮಿ , ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿ.ಬಿ. ಅರುಣ್ ಕುಮಾರ್, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಿಕುಮಾರ್ ಮಾತನಾಡಿದರು, ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದ ವಿಜೇತ ಕೆ.ಎಸ್.ಶಿಲ್ಪಾ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ವಿಜೇತ ನವ್ಯ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿ.ಉಮೇಶ್, ಸಂಘಟನಾ ಕಾರ್ಯದರ್ಶಿ ಶಂಕರೇಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸ್ವಾಮಿಗೌಡ ದೈಹಿಕ ಶಿಕ್ಷಣ ಪರಿವೀಕ್ಷಕ ಸ್ವಾಮಿಗೌಡ ಸಾಲಿಗ್ರಾಮ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಸೇರಿದಂತೆ ಶಿಕ್ಷಕರು ಹಾಜರಿದ್ದರು.

ಸರ್ಕಾರದ ಶಿಷ್ಟಾಚಾರ ಉಲ್ಲಂಘನೆ ಆರೋಪ

ಶಿಕ್ಷಕರ ದಿನಾಚರಣೆ ಕಾರ್ಯದಲ್ಲಿ  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ಫ್ಲೆಕ್ಸ್ ನಲ್ಲಿ ಹಾಕದೆ ಸರ್ಕಾರದ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರುದ್ರೇಶ್ ವಿರೋಧ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ರೇಡಿಯೋ ಮೈದಾನದಲ್ಲಿ ನಡೆಯುತ್ತಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಸಂಸದರು ಆದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಪಮಾನ ಮಾಡಿದ್ದು ಈ ಸಂಬಂಧ ಸಂಬಂಧ ಪಟ್ಟ ಇಲಾಖೆಯವರ ವಿರುದ್ದ ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.

ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಶಿಕ್ಷಣ ಇಲಾಖೆಯವರು ಕಾರ್ಯಕ್ರಮದ ವೇದಿಕೆಯಲ್ಲಿ ಅಳವಡಿಸಿದ ಫ್ಲೆಕ್ಸ್ ಗೆ ಹೆಚ್.ಡಿಕುಮಾರಸ್ವಾಮಿ ಅವರ ಭಾವಚಿತ್ರವನ್ನು ಅಳವಡಿಸಿ ನಂತರ ಕಾರ್ಯಕ್ರಮವನ್ನು ಮುಂದುವರೆಸಿದರು.

admin
the authoradmin

Leave a Reply