LatestMysoreNews

ಶರಣ ಸಾಹಿತ್ಯ ಸೇವೆಗೆ ವಚನ ಕುಮಾರಸ್ವಾಮಿ, ಆಧುನಿಕ ವಚನ ರಚನಾಕಾರ ನಗರ್ಲೆ ಶಿವಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ

ಮೈಸೂರಿನ ಇಬ್ಬರು ಸಾಧಕರಿಗೆ ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ ಗೌರವ

ಬೆಂಗಳೂರು: ಶರಣ ಸಾಹಿತ್ಯದ ಪ್ರಸಾರ, ಪ್ರಚಾರ ಹಾಗೂ ವಚನ ಸಂಸ್ಕೃತಿಯ ಬೆಳವಣಿಗೆಗೆ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ಮೈಸೂರಿನ ಇಬ್ಬರು ಸಾಹಿತ್ಯ ಸಾಧಕರಿಗೆ ಪ್ರತಿಷ್ಠಿತ ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ ಹಾಗೂ ಆಧುನಿಕ ವಚನ ರಚನಾಕಾರ ನಗರ್ಲೆ ಶಿವಕುಮಾರ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು ಹಾಗೂ ರಮಣಶ್ರೀ ಪ್ರತಿಷ್ಠಾನ, ಬೆಂಗಳೂರು ಇವರ ಸಹಯೋಗದಲ್ಲಿ ಪ್ರದಾನ ಮಾಡಲಾದ ಪ್ರಶಸ್ತಿಯು ರೂ. 20,000 ನಗದು ಹಾಗೂ ಪಾರಿತೋಷಕವನ್ನು ಒಳಗೊಂಡಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪರಮಪೂಜ್ಯ ಸ್ವಾಮಿ ಆದಿತ್ಯಾನಂದಜೀ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್, ರಮಣಶ್ರೀ ಪ್ರತಿಷ್ಠಾನದ ಅಧ್ಯಕ್ಷ ಎಸ್. ಷಡಕ್ಷರಿ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಮನು ಬಳಿಗಾರ್, ಕನ್ನಡಪ್ರಭ ಪತ್ರಿಕೆಯ ಪ್ರಧಾನ ಸಂಪಾದಕ ರವಿ ಹೆಗಡೆ, ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ರಮಣಶ್ರೀ ಪ್ರತಿಷ್ಠಾನದ ಟ್ರಸ್ಟಿ  ವೀರೇಂದ್ರ ಷಡಕ್ಷರಿ, ರಮಣಮಣಿ ಫೌಂಡೇಷನ್ ಟ್ರಸ್ಟಿ ಅರುಣಾ ಸತೀಶ್,  ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕಿ ರೂಪ ಕುಮಾರಸ್ವಾಮಿ ಉಪಸ್ಥಿತರಿದ್ದರು

admin
the authoradmin

Leave a Reply