ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್ ವಾರ್ಷಿಕೋತ್ಸವ ಉದ್ಘಾಟಿಸಿದ ಡಾ.ಭಾರತಿ ವಿಷ್ಣುವರ್ಧನ್

ಮೈಸೂರು: ನಗರದ ಹೊರವಲಯದಲ್ಲಿ ಉದ್ಬೂರು ಗೇಟ್ ಬಳಿ ಇರುವ ವಿಷ್ಣು ಸ್ಮಾರಕ ಭವನದಲ್ಲಿ ನಡೆದ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್ ಮೊದಲನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ನಟಿ ಡಾ. ಭಾರತಿ ವಿಷ್ಣುವರ್ಧನ್ ಉದ್ಘಾಟಿಸಿದರು.
ಇದೇ ವೇಳೆ ಆಚಾರ್ಯತ್ರಯರ ಹಾಗೂ ಸಾಹಸಸಿಂಹ ಕರ್ನಾಟಕ ರತ್ನ ಡಾ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್ 2026ರ ಕ್ಯಾಲೆಂಡರನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಇಂತಹ ಕಾರ್ಯಕ್ರಮಕ್ಕೆ ಭಾಗಿಯಾಗಿರುವುದು ನನಗೆ ಸಂತೋಷವನ್ನುಂಟು ಮಾಡಿದೆ. ಪಂಚಾಂಗ ಒಳಗೊಂಡಂತ ಕ್ಯಾಲೆಂಡರ್ ಬಹಳ ಉಪಯೋಗಕರವಾಗಿದೆ ಎಂದರಲ್ಲದೆ, ದೇವರ ಸೇವೆ ಮಾಡುವವರು, ದೇಶದ ಸುಭಿಕ್ಷೆ ಬಯಸುವವರು ನೀವೆಲ್ಲರೂ ನಿಮಗೆಲ್ಲ ದೇವರ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸಿದರು

ಮಾಜಿ ಮಹಾನಗರ ಪಾಲಿಕಾ ಸದಸ್ಯರಾದ ಮಾ.ವಿ.ರಾಮಪ್ರಸಾದ್ ಅಸಂಘಟಿತ ಪುರೋಹಿತ ಕಾರ್ಮಿಕರಿಗೆ ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಪ್ರತಿಯೊಬ್ಬರಿಗೂ ತಲುಪುವಂತಾಗಲಿ, ಹಾಗೂ ಸಂಘಟನೆ ಇನ್ನೂ ಹೆಚ್ಚು ಬಲಿಷ್ಠವಾಗಿ ಬೆಳೆಯಲಿ, ನಿಮ್ಮ ಸಂಘಟನೆ ಜೊತೆ ಸದಾ ನಾವು ಇರುತ್ತೇವೆ ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರು ರಾಷ್ಟ್ರೀಯ ಅಧ್ಯಕ್ಷ ಡಾ. ಎಂ ಬಿ ಅನಂತಮೂರ್ತಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಬಿ.ಎನ್.ಮಹೇಶ್ ಕುಮಾರ್, ರಾಜ್ಯಾಧ್ಯಕ್ಷ ಡಾ.ಶ್ರೀನಿವಾಸ್ ಮೂರ್ತಿ, ರಾಜ್ಯ ಉಪಾಧ್ಯಕ್ಷ ಡಾ.ಸತೀಶ್ ಸಿಂಹ, ಮಾಜಿ ಮಹಾನಗರ ಪಾಲಿಕಾ ಸದಸ್ಯರಾದ ಮ ವಿ ರಾಮಪ್ರಸಾದ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಕಾರ್ಯದರ್ಶಿ ಡಾ. ಲಕ್ಷ್ಮೀದೇವಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್.

ಗೌರವಾಧ್ಯಕ್ಷ ಲಕ್ಷ್ಮೀಶ, ಅಧ್ಯಕ್ಷ ಸಂತೋಷ್ ಕುಮಾರ್ ಎಸ್ ದೇಶಿಕ್, ಉಪಾಧ್ಯಕ್ಷ ಎಂ ವಿ ಗಣೇಶ್, ಪ್ರಧಾನ ಕಾರ್ಯದರ್ಶಿ ರವಿಶಂಕರ್, ಕಾರ್ಯದರ್ಶಿ ಗುರುರಾಜ್, ಜಂಟಿ ಕಾರ್ಯದರ್ಶಿ ರವೀಂದ್ರ, ವಿಜಯ ವಿಠಲಚಾರ್ಯ, ಕೆ ಎಲ್ ವಿ ಶರ್ಮ, ಎಂ ಎನ್ ಪ್ರಸನ್ನಕುಮಾರ್, ರಾಜಣ್ಣ, ದತ್ತ ಕುಮಾರ್, ಧನುಷ್, ವೇಣುಗೋಪಾಲ್, ಸಂತೋಷ್ ಕೆ ಎಸ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.







