LatestMysore

ಮೈಸೂರಿನ ಹಿಂದುಸ್ತಾನ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು,ಬೋಧಕ-ಬೋಧಕೇತರ ಸಿಬ್ಬಂದಿಗೆ ಉಚಿತ ಕಣ್ಣಿನ ತಪಾಸಣೆ

ಮೈಸೂರು: ಹಿಂದುಸ್ತಾನ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಹಾಗೂ ಎಎಸ್‌ಜಿ ಆಸ್ಪತ್ರೆಯ ಸಹಯೋಗದಲ್ಲಿ  ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರದ ಪ್ರಯೋಜನವನ್ನು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಬೋಧಕ- ಬೋಧಕೇತರ ಸಿಬ್ಬಂದಿ ಪಡೆದುಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯೆ ಡಾ. ಸಿ.ಜೆ. ಪ್ರಿಯಾ ವಹಿಸಿದ್ದರು. ಎನ್‌ಎಸ್‌ಎಸ್ ಅಧಿಕಾರಿ ರಘುನಂದನ್ ಜಿ.ಎಚ್. ಅವರು ಶಿಬಿರವನ್ನು ಸಂಯೋಜಿಸಿದರು. ಎಎಸ್‌ಜಿ ಆಸ್ಪತ್ರೆಯ ಕಾರ್ಯನಿರ್ವಾಹಕ ಮಾರುಕಟ್ಟೆ ಅಧಿಕಾರಿ ಜಾರ್ಜ್ ಹಾಗೂ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥೆ ಮತ್ತು ಸಹ ಪ್ರಾಧ್ಯಾಪಕರಾದ ಸವಿತಾ ಕೆ.ವಿ. ಅವರು ಉಪಸ್ಥಿತರಿದ್ದು, ಶಿಬಿರಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಶಿಬಿರದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಕಣ್ಣಿನ ಆರೋಗ್ಯದ ಕುರಿತು ಅಗತ್ಯ ಸಲಹೆ ಮತ್ತು ಮಾರ್ಗದರ್ಶನವನ್ನು ಪಡೆದುಕೊಂಡರು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸುವುದು ಶ್ಲಾಘನೀಯ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

admin
the authoradmin

Leave a Reply