LatestMysore

ನಾಡಪ್ರಭು ಕೆಂಪೇಗೌಡ ಜಯಂತೋತ್ಸವಕ್ಕೆ ಶಾಸಕ ಜಿ.ಟಿ. ದೇವೇಗೌಡ ದಂಪತಿಗೆ ಆಹ್ವಾನ

ಪಿರಿಯಾಪಟ್ಟಣ(ರವಿಚಂದ್ರ ಬೂದಿತಿಟ್ಟು): 517ನೇ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಸಮಿತಿ ವತಿಯಿಂದ ಶಾಸಕರಾದ ಜಿ.ಟಿ. ದೇವೇಗೌಡ ಹಾಗೂ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಲಲಿತಾ ಜಿ.ಟಿ. ದೇವೇಗೌಡ ದಂಪತಿಯನ್ನು ಆತ್ಮೀಯವಾಗಿ ಅಭಿನಂದಿಸಿ, ಜಯಂತೋತ್ಸವ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.

​ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಗೌಡರವರ ನೇತೃತ್ವದಲ್ಲಿ, ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಒಕ್ಕಲಿಗ ಸಮುದಾಯದ ಮುಖಂಡರು ಜಂಟಿಯಾಗಿ ಶಾಸಕ ಜಿ.ಟಿ. ದೇವೇಗೌಡ ಮತ್ತು ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ‘ಸಹಕಾರಿ ರತ್ನ’ ಪ್ರಶಸ್ತಿಗೆ ಭಾಜನರಾಗಿರುವ ಶ್ರೀಮತಿ ಲಲಿತಾ ಜಿ.ಟಿ. ದೇವೇಗೌಡ ಅವರಿಗೆ ಗೌರವ ಸಮರ್ಪಣೆ ಮಾಡಿ. ನಂತರ ಮುಂಬರುವ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿ ಕೋರಿದರು.

​ಈ ಸಂದರ್ಭದಲ್ಲಿ  ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಮರಿಸ್ವಾಮಿ, ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಗೌಡ, ಸಂಘದ ನಿರ್ದೇಶಕರಾದ ಮಂಜೇಗೌಡ, ಮಾಜಿ ನಗರಪಾಲಿಕೆ ಸದಸ್ಯರಾದ ಪ್ರೇಮಾ ಶಂಕರೇಗೌಡ ಹಾಗೂ ಪ್ರಮುಖರಾದ ಲಕ್ಷ್ಮಿದೇವಿ, ಚೇತನ್, ಎ. ರವಿ, ರಾಕೇಶ್ ಗೌಡ, ಮರೀಗೌಡ, ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು

admin
the authoradmin

Leave a Reply

Translate to any language you want