LatestNews

ಕೊಡಗಿನಲ್ಲಿ ಮುಂಗಾರು ಬಿರುಸು.. ಹಾರಂಗಿಯಿಂದ  ಹೆಚ್ಚುವರಿ ನೀರು ನದಿಗೆ… ಕೆಆರ್ ಎಸ್ ಗೆ ಬರುತ್ತಾ ಜೀವ ಕಳೆ?

ಕುಶಾಲನಗರ(ಆರ ಹೆಚ್): ಮಡಿಕೇರಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಜಲಾಶಯಕ್ಕೆ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿರುವುದರಿಂದ ಒಳಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣವೂ ಹೆಚ್ಚಾಗುತ್ತಿದೆ.

ಜಲಾಶಯದ  ಭದ್ರತಾ ಹಿತದೃಷ್ಟಿಯಿಂದ ಅಣೆಕಟ್ಟೆಯ ಮುಖ್ಯ ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ 13. ಸಾವಿರ ಕ್ಕೂ ಹೆಚ್ಚು ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಕಾವೇರಿ ನೀರಾವರಿ ನಿಗಮದ ಹಾರಂಗಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಹೇಶ್ ಮಾಹಿತಿ ನೀಡಿದ್ದಾರೆ. ಮಳೆ ಹೆಚ್ಚಾದರೆ ಹೊರಹರಿವಿನ ಪ್ರಮಾಣವೂ ಹೆಚ್ಚಾಗಲಿದೆ.

ಈಗಾಗಲೇ ಅಣೆಕಟ್ಟೆಗೆ ಒಳ ಹರಿವು 11. ಸಾವಿರದ 800, ಕ್ಯೂಸೇಕ್ಸ್ ನೀರು ಹರಿದು ಬರುತ್ತಿದ್ದು ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿಯಾಗಿ ಬರುತ್ತಿರುವ ನೀರನ್ನು ಕ್ರಸ್ಟ್ ಗೇಟ್  ಮತ್ತು ವಿದ್ಯುತ್ ಘಟಕದ ಮುಖೇನ ನದಿಗೆ ಹರಿಸಲಾಗುತ್ತಿದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಐ ಕೆ.ಪುಟ್ಟಸ್ವಾಮಿ ತಿಳಿಸಿದ್ದಾರೆ.

ಕೊಡಗಿನಲ್ಲಿ ಮಳೆ ಚೇತರಿಕೆಯಾಗಿದ್ದು ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಕೆಆರ್ ಎಸ್ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಲಿದೆ. ಆಗಸ್ಟ್ ನಲ್ಲಿ ಉತ್ತಮವಾಗಿ ಮಳೆಯಾಗಿದ್ದೇ ಆದರೆ ಕೆ ಆರ್ ಎಸ್ ಜಲಾಶಯ ಭರ್ತಿಯಾಗಬಹುದೇನೋ? ಸಾಮಾನ್ಯವಾಗಿ ಕೊಡಗಿನಲ್ಲಿ ಆಗಸ್ಟ್ ತಿಂಗಳಲ್ಲಿ ಭಾರೀ ಮಳೆ ಸುರಿಯುವುದು ಹಿಂದಿನಿಂದಲೂ ನಡೆದು ಬಂದಿದೆ. ಅಷ್ಟೇ ಅಲ್ಲದೆ ಭೂಕುಸಿತ ಸೇರಿದಂತೆ ಹಲವು ಅನಾಹುತಗಳಿಗೂ ಆಗಸ್ಟ್ ತಿಂಗಳು ಸಾಕ್ಷಿಯಾಗಿದೆ.

ಒಟ್ಟಾರೆ ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆಯಾದರೆ ಮಾತ್ರ ಕೆಆರ್ ಎಸ್ ಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದು ಕಾವೇರಿ ನೀರಿನ ಸಮಸ್ಯೆಗೆ ಪರಿಹಾರ ಕಾಣಲು ಸಾಧ್ಯವಾಗಲಿದೆ. ಜತೆಗೆ ರೈತರು ನಿಟ್ಟುಸಿರು ಬಿಡಲು ಸಾಧ್ಯವಾಗುತ್ತದೆ. ವರುಣದೇವ ಕರುಣೆ ತೋರಬೇಕಷ್ಟೆ…

admin
the authoradmin

Leave a Reply